ಮಡಿಕೇರಿ, ಜ. ೩೧: ತುಮಕೂರು ಮೂಲದ ಶ್ರೀ ಶಾರದಾಂಭ ಟ್ರಸ್ಟ್ ಎಂಬ ಹೆಸರಿನಲ್ಲಿ ಜನರಿಂದ ಹಣ ಸಂಗ್ರಹಿಸುತ್ತಿದ್ದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ನಗರದ ಫೀ.ಮಾ. ಕಾರ್ಯಪ್ಪ ವೃತ್ತದ ಬಳಿ ಈ ಬಗ್ಗೆ ಸ್ಥಳೀಯರೊಬ್ಬರು ೧೧೨ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದಾಗ ಯಾವುದೇ ದಾಖಲಾತಿಗಳಿಲ್ಲದಿರುವುದು ತಿಳಿದು ಬಂದಿದೆ. ನಂತರ ನಗರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಮತ್ತೆ ಈ ರೀತಿ ಹಣ ವಸೂಲಿ ಮಾಡದಂತೆ ಎಚ್ಚರಿಸಿ ಕಳುಹಿಸಿದ್ದಾರೆ.