ಮಡಿಕೇರಿ, ಜ. ೩೧: ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಸರ್ಕಾರದಿಂದ ಯೋಜನೆ ರೂಪಿಸಲು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಜಿಲ್ಲಾಧಿಕಾರಿಗಳಿಗೆ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಾಲಿನ ರಾಜ್ಯ ಮತ್ತು ಕೇಂದ್ರದ ಬಜೆಟ್‌ನಲ್ಲಿ ಜೀವನದಿ ಕಾವೇರಿ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ ಅವಶ್ಯವಿರುವ ಅನುದಾನವನ್ನು ಮೀಸಲಿರಿಸುವಂತೆ ಪತ್ರದಲ್ಲಿ ಕೋರಲಾಯಿತು.

ಜೀವನದಿ ಕಾವೇರಿ ಮೂಲ ಸ್ವರೂಪಕ್ಕೆ ಧಕ್ಕೆ ಆಗುವುದರೊಂದಿಗೆ ಸಂಪೂರ್ಣ ಕಲುಷಿತಗೊಳ್ಳುತ್ತಿದೆ. ಅದಕ್ಕೆ ಸಂಬAಧಿಸಿದAತೆ ಪ್ರಮುಖ ಕಾರಣಗಳು ಹಾಗೂ ವಾಸ್ತವ ಸ್ಥಿತಿಗತಿ ಬಗ್ಗೆ ಮಾಹಿತಿಗಳನ್ನು ಒಳಗೊಂಡ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ತಲಕಾವೇರಿಯಿಂದ ಜಿಲ್ಲೆಯ ಗಡಿಭಾಗ ಶಿರಂಗಾಲ ತನಕ ೨೩ ಗ್ರಾಮ ಪಂಚಾಯಿತಿ ಮತ್ತು ಒಂದು ಪಟ್ಟಣ ಪಂಚಾಯತಿ ವ್ಯಾಪ್ತಿಯ ನದಿ ತಟದ ಸಮಸ್ಯೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗಿದೆ.

ಕಾವೇರಿ ಹರಿಯುವ ಮಡಿಕೇರಿ, ವೀರಾಜಪೇಟೆ ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಪಂಚಾಯಿತಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮುದಾಯ ಶೌಚಾಲಯ ಮತ್ತು ಸಮರ್ಪಕ ನಿರ್ವಹಣೆ, ಕಸ ವಿಲೇವಾರಿಗೆ ವಾಹನ ಸೌಲಭ್ಯ ಮತ್ತು ನದಿ ತಟಗಳಲ್ಲಿ ತಡೆಗೋಡೆ ನಿರ್ಮಾಣ, ಗ್ರಾಮಗಳ ವ್ಯಾಪ್ತಿಯಲ್ಲಿ ನದಿತೀರದಲ್ಲಿರುವ ಅಕ್ರಮ ಶೆಡ್, ಕಟ್ಟಡಗಳ ಸ್ಥಳಾಂತರ ಮತ್ತು ಪುನರ್ವಸತಿ ಕಲ್ಪಿಸುವುದು. ಪ್ರವಾಸಿ ಕೇಂದ್ರಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳು ನೇರವಾಗಿ ನದಿ ಸೇರಿದಂತೆ ಯೋಜನೆ ರೂಪಿಸುವುದು, ಪ್ರವಾಸಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಪ್ಲಾಸ್ಟಿಕ್ ಬಾಟಲಿಗಳ ಹಾವಳಿಯನ್ನು ತಪ್ಪಿಸುವುದು, ನದಿ ತಟಗಳ ಒತ್ತುವರಿ ತೆರವುಗೊಳಿಸಿ ನದಿ ಗಡಿ ಗುರುತು ಮಾಡುವುದು ಮತ್ತು ಪ್ರದೇಶವನ್ನು ಅಭಿವೃದ್ಧಿಗೊಳಿಸುವುದು.

ಪಟ್ಟಣ ಮತ್ತು ಗ್ರಾಮಗಳ ತ್ಯಾಜ್ಯಗಳು ನೇರವಾಗಿ ನದಿಗೆ ಸೇರಿದಂತೆ ಇಂಗುಗುAಡಿ ನಿರ್ಮಾಣ ಮತ್ತು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು, ಕುಶಾಲನಗರ ಒಳಚರಂಡಿ ಕಾಮಗಾರಿ ಕೂಡಲೇ ಪೂರ್ಣ ಗೊಳಿಸಿ ಲೋಕಾರ್ಪಣೆ ಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಕಾವೇರಿ ನದಿ ಸಂರಕ್ಷಣೆಗಾಗಿ ಸರ್ಕಾರದ ಮೂಲಕ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಲ್ಪಿಸುವ ಮೂಲಕ ಹಂತಹAತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ದಕ್ಷಿಣ ಭಾರತದ ಜೀವನದಿ ಕಾವೇರಿ ಸಂರಕ್ಷಣೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಮನವಿ ಮಾಡಲಾಗಿದೆ.

ನದಿ ಸಂರಕ್ಷಣೆಯ ಸಂಬAಧ ಜಿಲ್ಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಸಂಬAಧಿಸಿದ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಮತ್ತು ನದಿಗೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್, ಜಿಲ್ಲಾ ಸಂಚಾಲಕಿ ರೀನಾ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಂಡೇಪAಡ ಬೋಸ್ ಮೊಣ್ಣಪ್ಪ, ನದಿ ಜಾಗೃತಿ ಸಮಿತಿಯ ಪ್ರಮುಖರಾದ ಡಿ .ಆರ್ ಸೋಮಶೇಖರ್, ಸಮಿತಿ ಗೌರವ ಸಲಹೆಗಾರರಾದ ಚೈಯಂಡ ಸತ್ಯ ಇದ್ದರು.