ಕೂಡಿಗೆ, ಜ. ೩೧: ಹೆಬ್ಬಾಲೆಯಲ್ಲಿ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ತಾ. ೪ ರಂದು ನಡೆಯಲಿದೆ. ರೂ. ೪೦ ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದ್ದು, ಉದ್ಘಾಟನೆಯನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಸಂಸದ ಪ್ರತಾಪ್ ಸಿಂಹ ನೆರವೇರಿಸಲಿದ್ದಾರೆ ಎಂದು ಅಧ್ಯಕ್ಷ ಹೆಚ್.ಜೆ. ಪರಮೇಶ್ ತಿಳಿಸಿದ್ದಾರೆ.
ಅಂಗಡಿ ಮಳಿಗೆಗಳ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ನಗದು ಕೌಂಟರ್ ಉದ್ಘಾಟನೆಯನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಕೊಡೆಂದೇರ ಪಿ. ಗಣಪತಿ, ಸಭಾಂಗಣ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಸುಜಾಕುಶಾಲಪ್ಪ, ವೀಣಾ ಅಚ್ಚಯ್ಯ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ, ಜಿಲ್ಲಾ ಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ಬಿ.ಡಿ. ಮಂಜುನಾಥ, ಬಿ.ಕೆ. ಚಿಣ್ಣಪ್ಪ, ಭರತ್ ಕುಮಾರ್, ಕುಮಾರಪ್ಪ, ಸಹಕಾರ ಸಂಘಗಳ ಉಪ ನಿಬಂಧಕ ಸಲೀಂ, ಸಹಾಯಕ ನಿಬಂಧಕ ಹೆಚ್.ಡಿ. ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್. ಅಶೋಕ್, ಜಿ.ಪಂ. ಮಾಜಿ ಸದಸ್ಯ ಶ್ರೀನಿವಾಸ್, ಗ್ರಾ.ಪಂ. ಮಾಜಿ ಅಧ್ಯಕ್ಷ ಹೆಚ್.ಎನ್. ರಾಜಶೇಖರ್, ಉದ್ಯಮಿ ನಾಪಂಡ ಮುತ್ತಪ್ಪ ಎನ್ನಿತರರು ಭಾಗವಹಿಸಲಿದ್ದಾರೆ.