ಸೋಮವಾರಪೇಟೆ: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಎನ್. ರಾಜು ಅವರು ವಿದ್ಯಾರ್ಥಿಗಳಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಮಾಡುವಾಗ ಯಾವುದೇ ಆಸೆ ಆಮಿಷಗಳಿಗೆ ಹಾಗೂ ಪೂರ್ವಾಗ್ರಹಗಳಿಗೆ ಒಳಗಾಗದೆ, ಪ್ರಾಮಾಣಿಕತೆಯಿಂದ ಮತದಾನ ಮಾಡಿ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿ ಎಂದರು.

ರಾಜ್ಯಶಾಸ್ತç ಸಹಾಯಕ ಪ್ರಾಧ್ಯಾಪಕಿ ಕೆ.ಹೆಚ್. ಧನಲಕ್ಷಿö್ಮÃ ಮಾತನಾಡಿ, ಮತದಾನ ಪ್ರತಿಯೊಬ್ಬರ ಹಕ್ಕು. ಅದನ್ನು ಸದುಪಯೋಗಪಡಿಸಿಕೊಳ್ಳಿ. ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯೂ ಸಹ ಮತದಾನ ಮಾಡುವ ಹಕ್ಕು ಪಡೆದಿದ್ದು, ಇದು ಸಂವಿಧಾನಾತ್ಮಕವಾಗಿ ಲಭ್ಯವಾಗಿರುವ ಅಧಿಕಾರ. ಅದನ್ನು ಪ್ರತಿಯೊಬ್ಬರೂ ಸಹ ಬಳಸಿಕೊಂಡು ದೇಶ ಕಟ್ಟುವ ಕಾಯಕದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ವೇದಿಕೆಯಲ್ಲಿ ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಬಿ.ಎಂ. ಪ್ರವೀಣ್‌ಕುಮಾರ್, ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ಎಂ.ಎಸ್. ಶಿವಮೂರ್ತಿ ಉಪಸ್ಥಿತರಿದ್ದರು.ವೀರಾಜಪೇಟೆ: ದೇಶದ ಭವಿಷ್ಯವನ್ನು ರೂಪಿಸಲು ಸಂವಿಧಾನದಡಿಯಲ್ಲಿ ಜನರ ಅನುಕೂಲಕ್ಕಾಗಿ ಮತದಾರರು ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಬಿ. ಲೋಕೇಶ್ ಕರೆ ನೀಡಿದರು.

ರಾಷ್ಟಿçÃಯ ಮತದಾರರ ದಿನಾಚರಣೆ ಅಂಗವಾಗಿ ವೀರಾಜಪೇಟೆ ಪುರಭವನದಲ್ಲಿ ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಚುನಾವಣೆ ಸಂದರ್ಭ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಮತದಾನದ ಸಂದರ್ಭ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬಾರದು. ಇದನ್ನು ಯುವ ಜನತೆ ಅರಿತುಕೊಳ್ಳಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ವಿ. ಕೋನಪ್ಪ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು. ತಾಲೂಕು ಕಚೇರಿ ಚುನಾವಣಾ ವಿಭಾಗದ ಶಿರಸ್ತೆದಾರ್ ಗಣೇಶ್ ಕುಮಾರ್, ಭೂದಾಖಲೆ ಸಹಾಯಕ ನಿರ್ದೇಶಕ ಬಿ. ಅರುಣ್ ಕುಮಾರ್, ಕಚೇರಿ ಶಿರಸ್ತೆದಾರ್ ಹೆಚ್.ಕೆ. ಪೊನ್ನು, ಕಂದಾಯ ಪರಿವೀಕ್ಷಕ ಎಂ. ಹರೀಶ್, ತಾಲೂಕು ಕಚೇರಿ ಸಿಬ್ಬಂದಿಗಳು, ಸಂತ ಅನ್ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.ಪೊನ್ನಂಪೇಟೆ: ಇಲ್ಲಿನ ಕಾವೇರಿ ಕಾಲೇಜಿನ ರಾಜ್ಯಶಾಸ್ತç ವಿಭಾಗದ ವತಿಯಿಂದ ರಾಷ್ಟಿçÃಯ ಮತದಾನ ದಿನಾಚರಣೆ ಆಚರಿಸಲಾಯಿತು.

ಕಾವೇರಿ ಕಾಲೇಜಿನ ನಿವೃತ್ತ ರಾಜ್ಯಶಾಸ್ತç ಪ್ರಾಧ್ಯಾಪಕಿ ಪ್ರೊ. ಎಂ.ಡಿ. ಅಕ್ಕಮ್ಮ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯುವ ಜನತೆಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾಲೇಜುಗಳಲ್ಲಿ ರಾಷ್ಟಿçÃಯ ಮತದಾನ ದಿನ ಆಚರಿಸಲಾಗುತ್ತದೆ.

೧೮ ವರ್ಷ ಮೇಲ್ಪಟ್ಟ ಪ್ರತಿ ಯೊಬ್ಬರೂ ಕೂಡ ಮತವನ್ನು ಚಲಾಯಿಸುವ ಮೂಲಕ, ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಹಣ, ಆಸೆ ಆಮಿಷಗಳಿಗೆ ಒಳಗಾಗದೆ ಸ್ವ-ಇಚ್ಛೆಯಿಂದ ಮತ ಚಲಾಯಿಸಬೇಕು ಎಂದರು. ನಂತರ ವಿದ್ಯಾರ್ಥಿಗಳಿಗೆ ಮತದಾನ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.

ಉಪಪ್ರಾಂಶುಪಾಲೆ ಡಾ. ಎ.ಎಸ್. ಪೂವಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಐಕ್ಯೂಎಸಿ ಸಂಚಾಲಕಿ ಎಂ.ಎಸ್. ಭಾರತಿ, ಕನ್ನಡ ಉಪನ್ಯಾಸಕಿ ಡಾ. ರೇವತಿ, ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಕೆ.ಟಿ. ಸೀತಮ್ಮ ಹಾಗೂ ಇನ್ನಿತರರು ಹಾಜರಿದ್ದರು.ಕೂಡಿಗೆ: ಕುಶಾಲನಗರ ಸರಕಾರಿ ಪದವಿ ಕಾಲೇಜಿನ ರಾಜ್ಯಶಾಸ್ತç ವಿಭಾಗ ಮತ್ತು ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ೧೨ನೇ ರಾಷ್ಟಿçÃಯ ಮತದಾರರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧನೆಯನ್ನು ಕಾಲೇಜಿನ ಅರ್ಥಶಾಸ್ತç ವಿಭಾಗದ ಸಹಾಯಕ್ಕಾಗಿ ಪ್ರಾಧ್ಯಾಪಕ ಡಾ. ಬಿ.ಡಿ. ಹರ್ಷ ಬೋಧಿಸಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ. ರಶ್ಮಿ, ಸಮಾಜಶಾಸ್ತç ವಿಭಾಗದ ಮುಖ್ಯಸ್ಥ ಡಾ. ಕೆ.ಆರ್. ಸುರೇಶ್ ಕುಮಾರ್, ಗ್ರಂಥಪಾಲಕ ಜಿ.ಎಸ್. ಚಂದ್ರಶೇಖರ್, ಕಾಲೇಜಿನ ಸಹಾಯಕ ಪ್ರಾಧ್ಯಾಪಕರುಗಳಾದ ಪಾವನಿ, ಸುಧಾಕರ್ ಹಾಗೂ ಕಾಲೇಜಿನ ಪ್ರಾಧ್ಯಾಪಕ ವರ್ಗ ಹಾಗೂ ಆಡಳಿತ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರೊ. ರಮೇಶ್ಚಂದ್ರ ಸ್ವಾಗತಿಸಿ, ಕಾವೇರಪ್ಪ ವಂದಿಸಿದರು. ಕಾರ್ಯಕ್ರಮವನ್ನು ಡಾ ಸುನೀಲ್ ಕುಮಾರ್ ನಿರೂಪಿಸಿದರು.