ಮಡಿಕೇರಿ, ಫೆ.೧: ಸುಂಟಿಕೊಪ್ಪ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ ೧*೮ ಎಂವಿಎ ಪರಿವರ್ತಕವನ್ನು ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೨ ರಂದು (ಇಂದು) ರಂದು ಬೆಳಗ್ಗೆ ೧೧ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ೬೬/೧೧ಕೆವಿ ಸುಂಟಿಕೊಪ್ಪ, ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಸುಂಟಿಕೊಪ್ಪ, ಕೆದಕಲ್, ನಾಕೂರು, ಮಾದಾಪುರ, ಚೆಟ್ಟಳ್ಳಿ, ಹೊಸಕೋಟೆ, ಮತ್ತಿಕಾಡು, ಮೋದೂರು, ಜಂಜೂರುಬಾಣೆ, ಬಿಳಿಗೇರಿ, ಗರ್ವಾಲೆ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.