ಸಿದ್ದಾಪುರ, ಫೆ. ೨: ಬೀದಿ ನಾಯಿಯೊಂದು ಶಾಲಾ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ. ಬೆಳಿಗ್ಗೆ ಶಾಲೆಗೆ ತೆರಳುತ್ತಿರುವ ಸಂದರ್ಭ ಬೀದಿ ನಾಯಿ ಶಾಲೆ ಮಕ್ಕಳ ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ತೆರಳಿದರು.
ನಾಯಿ ದಾಳಿಯಿಂದಾಗಿ ಭಯದಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೆಲವು ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ