ಗೋಣಿಕೊಪ್ಪ ವರದಿ, ಫೆ. ೧: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಕೀರೆಹೊಳೆ ದಂಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಂದಾಜು ೪೫ ವರ್ಷ ಪ್ರಾಯದ ಅಪರಿಚಿತ ಪುರುಷ ಶವವನ್ನು ಸ್ಥಳೀಯ ರುದ್ರಭೂಮಿಯಲ್ಲಿ ಅಂತ್ಯಸAಸ್ಕಾರ ನೆರವೇರಿಸಲಾಯಿತು.
ಸ್ನಾನಕ್ಕೆ ತೆರಳಿದಾಗ ಆಕಸ್ಮಿಕವಾಗಿ ಬಿದ್ದು ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ಕೊಳೆತ ಸ್ಥಿತಿಯಲ್ಲಿ ತಾ. ೨೮ ರಂದು ಶವ ಪತ್ತೆಯಾಗಿದ್ದು, ವಾರಸುದಾರರು ಯಾರು ಎಂದು ತಿಳಿಯದ ಕಾರಣ, ಪೊಲೀಸರು ಹಾಗೂ ಸ್ಥಳೀಯ ಆಡಳಿತದಿಂದ ಅಂತ್ಯಸAಸ್ಕಾರ ನೆರವೇರಿಸಲಾಯಿತು.