ಸಿದ್ದಾಪುರ, ಫೆ. ೧: ವೀರಾಜಪೇಟೆ ಅರಣ್ಯ ವಲಯದ ಅಮ್ಮತ್ತಿ ಶಾಖೆ ವ್ಯಾಪ್ತಿಗೆ ಬರುವ ಗ್ರಾಮಗಳಾದ ನಲ್ವತ್ತೋಕ್ಲು, ಬಿಳಗುಂದ, ಹೊಸಕೋಟೆ, ಕೆ. ಬೈಗೋಡು, ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ. ೨ ರಂದು (ಇಂದು) ಹಮ್ಮಿಕೊಂಡಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯ ಅಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.