ಮಡಿಕೇರಿ, ಫೆ. ೨ : ಜಿಲ್ಲೆಯಲ್ಲಿ ಬುಧವಾರ ೫೪೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೧೩೫, ಸೋಮವಾರಪೇಟೆ ತಾಲೂಕಿನಲ್ಲಿ ೨೩೮, ವೀರಾಜಪೇಟೆ ತಾಲೂಕಿನಲ್ಲಿ ೧೭೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೪೫,೦೨೭ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೯೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೪೦,೯೭೯ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೪೨ ಮರಣ ಪ್ರಕರಣಗಳು ವರದಿಯಾಗಿವೆ. ೩೬೦೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೨೫೧ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧೯.೬೬ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.