*ಗೋಣಿಕೊಪ್ಪ, ಫೆ. ೨: ಜಿಲ್ಲೆಯಲ್ಲಿ ಗೋ ಶಾಲೆ ಪ್ರಾರಂಭಿಸಿ ದಂತೆ ತಾಲೂಕು ಮಟ್ಟದಲ್ಲೂ ಗೋಶಾಲೆ ಪ್ರಾರಂಭಿಸುವ ಚಿಂತನೆ ಇದೆ. ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲಾಗುವುದೆAದು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಅವರು ತಿಳಿಸಿದರು. ಶ್ರೀಮಂಗಲ ಗ್ರಾಮ ಪಂಚಾಯಿತಿಯ ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡವನ್ನು ಜನಸೇವೆಗೆ ಸಮರ್ಪಿಸಿ ಮಾತನಾಡಿದರು. ರೈತರು ತಮ್ಮ ಸಾಕು ಪ್ರಾಣಿಗಳನ್ನು ಆರೋಗ್ಯದಾಯಕವಾಗಿ ಕಾಪಾಡಿಕೊಳ್ಳಲು ಪಶು ವೈದ್ಯಕೀಯ ಆಸ್ಪತ್ರೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ೪೦ ಲಕ್ಷ ರೂಪಾಯಿ ಅನುದಾನದೊಂದಿಗೆ ಶ್ರೀಮಂಗಲ ಜನರ ಅನುಕೂಲಕ್ಕಾಗಿ ಪಶುವೈದ್ಯ ಆಸ್ಪತ್ರೆಯ ಕಟ್ಟಡವನ್ನು ನಿರ್ಮಿಸ ಲಾಗಿದೆ. ಕ್ಷೇತ್ರದಲ್ಲಿ ೪ ಕಟ್ಟಡಗಳನ್ನು ಕಟ್ಟಲಾಗುತ್ತಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಗೋವುಗಳನ್ನು ನಾವು ದೇವರೆಂದು ಪೂಜಿಸುತ್ತೇವೆ. ಇಂತಹ ಗೋವುಗಳ ಮತ್ತು ಇನ್ನಿತರ ಸಾಕುಪ್ರಾಣಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಾಕುಪ್ರಾಣಿ ಸಾಕುವವರ ಕರ್ತವ್ಯವಾಗಿದೆ. ತಕ್ಷಣಕ್ಕೆ ಜಾನುವಾರುಗಳ ಆರೋಗ್ಯ ಸೇವೆ ಲಭಿಸುವ ಉದ್ದೇಶದಿಂದ ಶಾಸಕರು ಗ್ರಾಮೀಣ ಭಾಗದಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಿಸಲು ಅನುದಾನವನ್ನು ಒದಗಿಸಿಕೊಟ್ಟಿದ್ದಾರೆ ಎಂದರು. ಜಿಲ್ಲಾ ಪಶುಪಾಲನಾ ಶ್ರೀಮಂಗಲ ಗ್ರಾ.ಪಂ. ಅಧ್ಯಕ್ಷ ಅಜ್ಜಮಾಡ ಸಿ. ಜಯ, ಉಪಾಧ್ಯಕ್ಷೆ ಚೋಕಿರ ಕಲ್ಪನಾ, ವೀರಾಜಪೇಟೆ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ. ಎ.ಜಿ. ತಮ್ಮಯ್ಯ, ಪೊನ್ನಂಪೇಟೆ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಎ.ಎಸ್. ಶಾಂತೇಶ್, ಶ್ರೀಮಂಗಲ ಮುಖ್ಯ ಪಶು ವೈದ್ಯಾಧಿಕಾರಿ ಪಿ.ಜಿ. ಗಿರೀಶ್ ಪ್ರಮುಖರಾದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಜ್ಞAಗಡ ಅರುಣ್ ಭೀಮಯ್ಯ, ತಾಲೂಕು ಅಧ್ಯಕ್ಷ ನೆಲ್ಲೀರ ಚಲನ್ಕುಮಾರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ, ಪ್ರಮುಖರಾದ ಅಜ್ಜಮಾಡ ಕಟ್ಟಿ ಮಂದಯ್ಯ, ಮಚ್ಚಮಾಡ ಟಿ. ಕಾರ್ಯಪ್ಪ, ಹಾಗೂ ಗ್ರಾ.ಪಂ. ಸದಸ್ಯರುಗಳು, ಸ್ಥಳೀಯರು ಹಾಜರಿದ್ದರು.