ಮಡಿಕೇರಿ, ಫೆ. ೧: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ಇವರ ವತಿಯಿಂದ ‘ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ೧೨೩ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ವೀರಾಜಪೇಟೆಯ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಬಿ.ಕೆ. ಗೀತಾ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.