ಗೋಣಿಕೊಪ್ಪಲು, ಫೆ. ೨: ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಸಹಕಾರಿಯಾಗಿದೆ. ಆ ಮೂಲಕ ಬಡ ಜನತೆಗೆ ವಾರ್ಷಿಕ ೧೦೦ ದಿನಗಳ ಉದ್ಯೋಗ ಲಭ್ಯವಾಗುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಹೇಳಿದರು.
ಕೊಡಗು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವೀರಾಜಪೇಟೆ, ಗ್ರಾಮ ಪಂಚಾಯಿತಿ ಕೆ.ಬಾಡಗ ಹಾಗೂ ಕರ್ನಾಟಕ ರಾಜ್ಯ ಮಹಾತ್ಮಾ ಗಾಂಧಿ ನರೇಗಾ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಚೂರಿಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನರೇಗಾ ದಿನಾಚರಣೆ ಹಾಗೂ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರನ್ನು ಶಕ್ತರನ್ನಾಗಿ ಮಾಡಲು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಯೋಜನೆ ಜಾರಿಗೊಳಿಸಿದೆ. ಕೇಂದ್ರದಲ್ಲಿ ಇದು ಕಾನೂನಾಗಿದ್ದರೆ, ರಾಜ್ಯದಲ್ಲಿ ಯೋಜನೆ ಆಗಿ ಜಾರಿ ಆಗಿದೆ. ೧೬ ವರ್ಷಗಳ ಹಿಂದೆ ಉದ್ಯೋಗ ಖಾತ್ರಿ ಯೋಜನೆ ಜಾರಿಯಾಗಿತ್ತು. ಇದೀಗ ಜಿಲ್ಲೆಯಲ್ಲಿ ಶೇ. ೧೦೦ ಪ್ರಗತಿಯತ್ತ ಸಾಗಿದೆ. ಇದು ಶ್ಲಾಘನಾರ್ಹ ಎಂದರು.
ಕೆ. ಬಾಡಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷಿö್ಮ ಕಳೆದ ವರ್ಷದವರೆಗೂ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರೀಕ್ಷಿತ ಮಟ್ಟಕ್ಕೆ ತಲುಪಲು ಸಾಧ್ಯವಾಗಿರಲಿಲ್ಲ. ಇದೀಗ ಎನ್‌ಆರ್‌ಇಜಿಯಲ್ಲಿ ಉತ್ತಮ ತಂಡ ಜಿಲ್ಲೆಯಾದ್ಯಂತ ಕೆಲಸ ಮಾಡುತ್ತಿರುವುದರಿಂದ ಶೇ. ೧೦೦ ಸಾಧನೆಯತ್ತ ದಾಪುಗಾಲು ಇಟ್ಟಿದ್ದೇವೆ. ರಾಜ್ಯ ಸರ್ಕಾರ ನೀಡಿದ ಗುರಿಯನ್ನು ತಲುಪಿದ್ದೇವೆ. ಪೊನ್ನಂಪೇಟೆ ತಾಲೂಕು ಕೆ.ಬಾಡಗ ಪಂಚಾಯಿತಿ ತಾಲೂಕಿನಲ್ಲಿ ಉತ್ತಮ ಸ್ಥಾನ ಪಡೆದು ಮೊದಲ ಪಂಚಾಯಿತಿ ಎಂಬ ಕೀರ್ತಿಗೆ ಪಾತ್ರವಾಗಿದೆ ಎಂದರು.
ಉದ್ಯೋಗ ಖಾತ್ರಿಯಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯಿತಿಯ ಪಿಡಿಓ ಕಳ್ಳಿಚಂಡ ಪೂಣಚ್ಚ ಅವರನ್ನು ಈ ಸಂದರ್ಭ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ, ಪೆಮ್ಮಣಮಾಡ ರಮೇಶ್, ಪೆಮ್ಮಣಮಾಡ ನವೀನ್, ಮುಕ್ಕಾಟೀರ ರಿತೇಶ್ ಬಿದ್ದಪ್ಪ ಮಾತನಾಡಿದರು.
ವೇದಿಕೆಯಲ್ಲಿ ಪೊನ್ನಂಪೇಟೆ ತಾಲೂಕು ಇಒ ಕೊಣಿಯಂಡ ಅಪ್ಪಣ್ಣ, ಉಪಾಧ್ಯಕ್ಷೆ ರಿಟಾ ವಿಜಯ, ಮಡಿಕೇರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖರ್, ಪಿಡಿಒ ಸಂಘದ ಜಿಲ್ಲಾಧ್ಯಕ್ಷರು ಮತ್ತು ಸೋಮವಾರಪೇಟೆ ತಾಲೂಕು ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರವೀಶ್ ಉಪಸ್ಥಿತರಿದ್ದರು. ಜಿಲ್ಲಾ ಐಇಸಿ ಸಂಯೋಜಕ ಪವನ್ ಕುಮಾರ್ ನರೇಗಾ ಯೋಜನೆಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮನರೇಗಾ ಯೋಜನೆಯ ಅನುಷ್ಠಾನದಲ್ಲಿ ಮುಖ್ಯ ಪಾತ್ರವಹಿಸುವ ಜೊತೆಗೆ ನರೇಗಾ ನೌಕರರಿಗೆ ಅಗತ್ಯ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ, ತಾಂತ್ರಿಕ ಸಹಾಯಕ ಅಭಿಯಂತರ ಹೇಮಂತ್, ಗಣೇಶ್, ತಾಂತ್ರಿಕ ಸಂಯೋಜಕ ನಿರಂಜನ್, ತಾಲೂಕು ಐ.ಇ.ಸಿ. ಸಂಯೋಜಕ ನರೇಂದ್ರ, ಮುಂತಾದವರು ಉಪಸ್ಥಿತರಿದ್ದರು.