ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯದ ಕರಿಕೆ ಕಾರ್ಯಕ್ಷೇತ್ರದಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಉದ್ಘಾಟನೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯದ ಮೇಲ್ವಿಚಾರಕ ಸಂತೋಷ ಕೆ. ಅವರು ಮಾತನಾಡಿ, ಸರಕಾರದ ಸವಲತ್ತುಗಳು ಜನಸಾಮಾನ್ಯರಿಗೆ ತಂತ್ರಜ್ಞಾನದ ಮೂಲಕ ಅತ್ಯಂತ ಪಾರದರ್ಶಕತೆಯಿಂದ ಕಡಿಮೆ ಅವಧಿಯಲ್ಲಿ ದೊರಕಿಸುವ ಪರಿಣಾಮಕಾರಿ ವ್ಯವಸ್ಥೆ ಇದಾಗಿದ್ದು, ಕಾಗದಪತ್ರಗಳ ವರ್ಗಾವಣೆ ಅಥವಾ ಸಲ್ಲಿಕೆ ಇಲ್ಲದೆ ಕಡಿಮೆ ಸಮಯದಲ್ಲಿ ತಂತ್ರಜ್ಞಾನದ ಮೂಲಕ ಸೌಲಭ್ಯವನ್ನು ಸಾಮಾನ್ಯ ಸೇವಾ ಕೇಂದ್ರದ ಮುಖಾಂತರ ಪಡೆಯಬಹುದಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಎಳ್ಳುಕೊಚ್ಚಿ ಒಕ್ಕೂಟದ ಅಧ್ಯಕ್ಷ ಜಯಂತ, ಉದ್ಯಮಿಗಳಾದ ಪ್ರಭಾಕರ್, ವೀರಾಜಪೇಟೆ ತಾಲೂಕಿನ ನೋಡಲ್ ಅಧಿಕಾರಿ ಭರತ್‌ಕುಮಾರ್, ಸೇವಾ ಪ್ರತಿನಿಧಿಗಳಾದ ಜಯಂತಿ, ಗಂಗಾಧರ, ಸಹಾಯಕರಾದ ಶ್ರೀನಿವಾಸ್, ಚೆತ್ತುಕಾಯ ಮತ್ತು ಎಳ್ಳುಕೊಚ್ಚಿ ಒಕ್ಕೂಟದ ಪದಾಧಿಕಾರಿಗಳು ಮತ್ತಿತರರು ಇದ್ದರು.ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಂತಳ್ಳಿ ವಲಯ ಕಚೇರಿಯಲ್ಲಿ ನೂತನವಾಗಿ ಸಾಮಾನ್ಯ ಸೇವಾ ಕೇಂದ್ರ ಆರಂಭಿಸಲಾಗಿದ್ದು, ಇದರ ಉದ್ಘಾಟನೆಯನ್ನು ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೂಲಕ ಅನುಷ್ಠಾನಗೊಳ್ಳುತ್ತಿರುವ ಡಿಜಿಟಲ್ ಸೇವಾ ಕೇಂದ್ರದ ಉಪಯೋಗಗಳ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸಬೇಕು. ಸೇವಾ ಸೌಲಭ್ಯಗಳನ್ನು ತಲುಪಿಸುವಲ್ಲಿ ಸ್ವಸಹಾಯ ಸಂಘದ ಸದಸ್ಯರು ಸಕ್ರಿಯರಾಗಿರಬೇಕು ಎಂದರು. ಈ ಸಂದರ್ಭ ಇ-ಶ್ರಮ್ ಪ್ರಮಾಣ ಪತ್ರಗಳನ್ನು ಸದಸ್ಯರಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೇಶ್, ತಾಲೂಕು ಯೋಜನಾಧಿಕಾರಿ ರೋಹಿತ್, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಹಾನಗಲ್ಲು ಗ್ರಾ.ಪಂ. ಅಧ್ಯಕ್ಷೆ ಲಕ್ಷಿö್ಮÃ ಪಾಂಡಿಯನ್, ತಾ.ಪಂ. ಮಾಜಿ ಸದಸ್ಯೆ ತಂಗಮ್ಮ, ಒಕ್ಕೂಟದ ಅಧ್ಯಕ್ಷೆ ಚಂದ್ರಿಕಾ ಧರ್ಮೇಶ್, ಗ್ರಾ.ಪಂ. ಸದಸ್ಯರಾದ ಪ್ರಕಾಶ್, ರೇಣುಕಾ ವೆಂಕಟೇಶ್, ಜ್ಯೋತಿ, ವಿಎಲ್‌ಇ ಆಪರೇಟರ್ ಪೂಜಾ, ವಿಪತ್ತು ನಿರ್ವಹಣಾ ತಂಡದ ರಾಮ್‌ದಾಸ್, ಮೇಲ್ವಿಚಾರಕಿ ಕಲಾವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.ಶನಿವಾರಸಂತೆ: ಗ್ರಾಮೀಣ ಪ್ರದೇಶಗಳಲ್ಲಿನ ಮಹಿಳೆಯರಿಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ವಿವಿಧ ಸಂಘ-ಸAಸ್ಥೆಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವಕಾಶ ಕಲ್ಪಿಸಿಕೊಡುತ್ತಿವೆ ಎಂದು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕ ಜಮೀರ್ ಅಹಮ್ಮದ್ ಅಭಿಪ್ರಾಯಪಟ್ಟರು.

ಸಮೀಪದ ಆಲೂರು ಸಿದ್ದಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯದ ನೂತನ ವಲಯ ಕಚೇರಿ ಹಾಗೂ ಸಾಮಾನ್ಯ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಬಹುತೇಕ ಜನಸಾಮಾನ್ಯರು ಕೈ ಸಾಲ ಮಾದರಿಯ ಬಡ್ಡಿ ವ್ಯವಹಾರದ ವ್ಯವಸ್ಥೆಯ ಕಪಿಮುಷ್ಠಿಯಲ್ಲಿ ಸಿಲುಕಿಕೊಂಡು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಂತಹವರು ಗುಡಿ ಕೈಗಾರಿಕೋದ್ಯಮ, ಸ್ವಾವಲಂಬನೆ ಸಾಧಿಸುವ ಪ್ರಗತಿದಾಯಕ ಕಾರ್ಯಗಳನ್ನು ಹಮ್ಮಿಕೊಂಡು ಆತ್ಮಸ್ಥೆöÊರ್ಯ ಬೆಳೆಸಿಕೊಳ್ಳುವ ಅನಿವಾರ್ಯತೆ ಇತ್ತು. ಇಂತಹ ಸಂದರ್ಭದಲ್ಲಿ ಪ್ರತಿ ಹಳ್ಳಿಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಉತ್ತಮ ಕಾರ್ಯ ಮಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಎಂದರು. ನೂತನ ವಲಯ ಕಚೇರಿ ಹಾಗೂ ಸಾಮಾನ್ಯ ಸೇವಾ ಕೇಂದ್ರವನ್ನು ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ಮುಖಂಡರಾದ ಜಯಕುಮಾರ್ ಹಾಗೂ ಬೋಪಯ್ಯ ಉದ್ಘಾಟಿಸಿದರು.

ವಲಯ ಮೇಲ್ವಿಚಾರಕ ಲೋಹಿತ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಒಪ್ಪಂದದAತೆ ಡಿಜಿಟಲ್ ಸೇವಾ ಕೇಂದ್ರಗಳ ಕುರಿತು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಮಾಡುವುದರೊಂದಿಗೆ ಸೇವಾ ಸೌಲಭ್ಯಗಳನ್ನು ಸದಸ್ಯರಿಗೆ, ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ವ ಸಹಾಯ ಸಂಘದ ಸದಸ್ಯರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು. ಇ-ಶ್ರಮ್ ಕಾರ್ಡ್ಬಗ್ಗೆ ಮಾಹಿತಿ ನೀಡಿದರು. ಆಲೂರು ಒಕ್ಕೂಟದ ಅಧ್ಯಕ್ಷೆ ಕಲಾವತಿ, ಮಾಲಂಬಿ ಒಕ್ಕೂಟದ ಅಧ್ಯಕ್ಷೆ ದಿವ್ಯಲತಾ, ಸೇವಾ ಪ್ರತಿನಿಧಿಗಳಾದ ಮಂಜುಳಾ, ಸುಮಲತಾ, ಉಷಾ, ವಿಎಲ್‌ಇ ಸಹಾಯಕಿ ರಮ್ಯಾ, ಪ್ರಿಯಾ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಹಾಜರಿದ್ದರು.ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯದ ಕುಂದಚೇರಿ ಕಾರ್ಯಕ್ಷೇತ್ರದಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ಕುಂದಚೇರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಉದ್ಘಾಟನೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ಶ್ರೀ ಪದ್ಮಯ್ಯ ಸಿಎಚ್ ರವರು ಮಾತನಾಡುತ್ತಾ, ಸಾಮಾನ್ಯ ನಾಗರಿಕರಿಗೆ ಸರಕಾರದ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಘನವೆತ್ತ ಕೇಂದ್ರ ಸರಕಾರದ ಸಾಮಾನ್ಯ ಸೇವಾ ಕೇಂದ್ರವನ್ನು ಧರ್ಮಸ್ಥಳ ಯೋಜನೆಯ ಮುಖಾಂತರ ಪ್ರಾರಂಭಿಸಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯದ ಮೇಲ್ವಿಚಾರಕರಾದ ಸಂತೋಷ್. ಕೆ, ಕೊಡಗು ಜಿಲ್ಲಾ ನೋಡೆಲ್ ಅಧಿಕಾರಿ ಹರ್ಷಿತ್ ಕುಮಾರ್, ವೀರಾಜಪೇಟೆ ತಾಲೂಕಿನ ನೋಡಲ್ ಅಧಿಕಾರಿ ಭರತ್ , ಬೇಂಗೂರು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಶಶಿಕಲಾ, ಕುಂದಚೇರಿ ವಿಭಾಗದ ಸೇವಾ ಪ್ರತಿನಿಧಿಯಾದ ಅಣ್ಣಯ್ಯ, ಕುಂದಚೇರಿ ಒಕ್ಕೂಟದ ಕಾರ್ಯದರ್ಶಿ ವೇಣು ಕುಮಾರ್ ಮತ್ತಿತರರು ಇದ್ದರು.