ಮಡಿಕೇರಿ, ಫೆ. ೩: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಸಹಾಯ ಗುಂಪುಗಳಿಗೆ ಕಿರುಸಾಲ ಯೋಜನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯ ಪಡೆಯಲು ಬಯಸುವ ಅರ್ಜಿದಾರರು ಪ್ರವರ್ಗ-೧ ರಲ್ಲಿ ಬರುವ ಜಾತಿಗಳಿಗೆ ಸೇರಿದವರಾಗಿದ್ದು, ಸ್ವಸಹಾಯ ಸಂಘದ ಸದಸ್ಯರಾಗಿರಬೇಕು.

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಅರ್ಜಿದಾರರು ಮಡಿವಾಳ ಹಾಗೂ ಅದರ ಉಪಜಾತಿಗೆ ಸೇರಿದವರಾಗಿರಬೇಕು.

ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯುವ ಅರ್ಜಿದಾರರು ಪ್ರವರ್ಗ-೧ ರಲ್ಲಿ ಬರುವ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.

ಈ ನಿಗಮಗಳ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರು ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಾಡ್ರಿಗಸ್ ಕಟ್ಟಡದ ಎದುರು, ರೇಸ್‌ಕೋರ್ಸ್ ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ತಾ. ೧೦ ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ದೂ. ೦೮೨೭೨-೨೨೧೬೫೬ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.