ಮಡಿಕೇರಿ, ಫೆ. ೩: ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಾ. ೪ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಬೆಳಿಗ್ಗೆ ೧೧ ಗಂಟೆಗೆ ಕುಶಾಲನಗರ ತಾಲೂಕಿನ ಹೆಬ್ಬಾಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸಿ. ಸುಬ್ರಮಣ್ಯ ಗೌಡ ತಿಳಿಸಿದ್ದಾರೆ.