ಮಡಿಕೇರಿ, ಫೆ. ೨: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಮಡಿವಾಳ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಪಿ.ಜಿ. ಸುಕುಮಾರ್ ಅವರು ಜ್ಯೋತಿ ಬೆಳಗಿಸಿ ಪುಷ್ಪಾರ್ಚನೆ ನೆರವೇರಿಸಿದರು ಹಾಗೂ ಜಿಲ್ಲಾಡಳಿತದ ಪರವಾಗಿ ಚುನಾವಣಾ ಶಿರಸ್ತೆದಾರ್ ಪ್ರಕಾಶ್ ಪುಷ್ಪಾರ್ಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಡಿವಾಳ ಅಭಿವೃದ್ಧಿ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಬಿ. ವಿಷ್ಣು, ಮಡಿವಾಳ ಅಭಿವೃದ್ಧಿ ಸಂಘದ ಜಿಲ್ಲಾ ಸಲಹೆಗಾರರಾದ ಪಿ.ಜಿ. ಕಮಲ್, ಖಜಾಂಚಿ ಎಂ.ಬಿ. ಚೇತನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್ ಇತರರು ಹಾಜರಿದ್ದರು.