ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಶಶಿಕಲಾ, ಇಳವರಸಿ ಸೇರಿ ಹಲವರ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು, ಫೆ. ೨: ಅಕ್ರಮ ಆಸ್ತಿ ಸಂಪಾದನೆಯಡಿ ಜೈಲು ಶಿಕ್ಷೆ ಅನುಭವಿಸಿರುವ ತಮಿಳುನಾಡಿನ ವಿ. ಶಶಿಕಲಾ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಜೈಲು ಅಧಿಕಾರಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ದಿನಗಳಲ್ಲಿ ರಾಜಾತಿಥ್ಯ ಕಲ್ಪಿಸಲು ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣದ ತನಿಖೆ ಕೈಗೊಂಡಿದ್ದ ಎಸಿಬಿ ಈಗ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಶಶಿಕಲಾ, ಇಳವರಸಿ ಆಗಿನ ಜೈಲು ಅಧಿಕಾರಿ ಹಾಗೂ ಇನ್ನೂ ಮೂವರು ಸಿಬ್ಬಂದಿಗಳ ಹೆಸರನ್ನು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ೨೦೧೭ ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ ೨೦೨೧ ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಲಂಚ, ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪಕ್ಕೆ ಸಂಬAಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಫೆ.೨ ರಂದು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಡಿ. ೩೦, ೨೦೨೧ ರಲ್ಲಿ ಆರೋಪಕ್ಕೆ ಸಂಬAಧಿಸಿದAತೆ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಸರ್ಕಾರ ಅನುಮತಿ ನೀಡಿರುವುದಾಗಿ ಸರ್ಕಾರದ ಪರ ವಕೀಲರು ಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಎಸಿಬಿ ಪರ ವಕೀಲರು ಮಾತನಾಡಿ ತನಿಖಾ ಸಂಸ್ಥೆ ಸಂಬAಧಪಟ್ಟ ಕೋರ್ಟ್ನಲ್ಲಿ ಚಾರ್ಜ್ ಶೀಟ್ನ್ನು ಜ.೭ ರಂದು ೨೦೨೨ ರಲ್ಲಿ ಸಲ್ಲಿಸಿದ್ದು ಸರ್ಕಾರ ಇದಕ್ಕೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ. ಶಶಿಕಲಾ, ಇಳವರಸಿ ಜೊತೆ ಕೃಷ್ಣ ಕುಮಾರ್, ಡಾ. ಆರ್. ಅನಿತಾ, ಬಿ. ಸುರೇಶ್, ಗಜರಾಜ ಮಾಕನೂರು ಪ್ರಮುಖ ಆರೋಪಿಗಳಾಗಿದ್ದಾರೆ. ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರನ್ನೊಳಗೊಂಡAತೆ ಭ್ರಷ್ಟಾಚಾರದ ಪ್ರಕರಣದಲ್ಲಿ ಶಶಿಕಲಾ, ಇಳವರಸಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಲಂಚ ಪಡೆದು ಜೈಲಿನಲ್ಲಿ ಸವಲತ್ತುಗಳನ್ನು ನೀಡಿದ್ದ ವಿಷಯವಾಗಿ ಅಂತಿಮ ವರದಿಯನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ೨೦೨೧ ರಲ್ಲಿ ಚೆನ್ನೈ ನ ಸಾಮಾಜಿಕ ಕಾರ್ಯಕರ್ತೆ ಗೀತಾ ಹಾಗೂ ಶಿಕ್ಷಣತಜ್ಞರಾದ ಕೆ.ಎಸ್. ಗೀತಾ ಎಂಬುವವರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ, ಫೆ. ೨: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಮೃತ ಭಯೋತ್ಪಾದಕನನ್ನು ಉಮರ್ ಇಶ್ಫಾಕ್ ಮಲಿಕ್ ಅಲಿಯಾಸ್ ಮೂಸಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್ನ ನಾಡಿಗಂ ಗ್ರಾಮ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಸೇನೆ ಮತ್ತು ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಯೋಧರ ತಂಡ ಸ್ಥಳಕ್ಕಾಗಮಿಸುತ್ತಿದ್ದಂತೆಯೇ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಅವನ ದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಶೋಪಿಯಾನ್ನ ಬೊಂಗಮ್ ನಿವಾಸಿ ಮಲಿಕ್ ಅಲಿಯಾಸ್ ಮೂಸಾ ನಿಷೇಧಿತ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ನೊಂದಿಗೆ ಸಂಬAಧ ಹೊಂದಿದ್ದಾನೆ ಎಂದು ಅವರು ಹೇಳಿದರು. ಹತ್ಯೆಗೀಡಾದ ಭಯೋತ್ಪಾದಕ ೨೦೨೦ರಿಂದ ಸಕ್ರಿಯವಾಗಿದ್ದು, ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ವಕ್ತಾರರು ತಿಳಿಸಿದ್ದಾರೆ. ಇತ್ತೀಚೆಗೆ ಶೋಪಿಯಾನ್ನ ಅಮಿಶಿಜಿಪೋರಾದಲ್ಲಿ ಎಎಸ್ಐ ಶಬೀರ್ ಅಹ್ಮದ್ ಮೇಲೆ ನಡೆದ ದಾಳಿಯಲ್ಲೂ ಮಲಿಕ್ ಭಾಗಿಯಾಗಿದ್ದಾನೆ ಎಂದು ಅವರು ಹೇಳಿದರು.