ಮಡಿಕೇರಿ, ಫೆ. ೩: ಮೂಲನಿವಾಸಿ ಜನಾಂಗದ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಜೇನುಕುರುಬ ಜನಾಂಗದವರಿಗೆ ಜೇನು ಸಾಕಾಣಿಕೆಗೆ ಜೇನುಪೆಟ್ಟಿಗೆ ಹಾಗೂ ಜೇನುಗೂಡು ಉಚಿತವಾಗಿ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಜಿಲ್ಲಾ ಪಂಚಾಯಿತಿ ಕಟ್ಟಡ, ೧ನೇ ಮಹಡಿ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೦೦೫೦೦, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವೀರಾಜಪೇಟೆ ೦೮೨೭೪-೨೬೧೨೬೧ ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫ ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ ೦೮೨೭೨-೨೨೩೫೫೨ ಇಲ್ಲಿ ಪಡೆದು ತಾ. ೧೨ ರೊಳಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಜಾತಿ ದೃಢೀಕರಣ ಪತ್ರ, ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ, ಅರಣ್ಯ ಹಕ್ಕುಪತ್ರ, ಆರ್.ಟಿ.ಸಿ, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.