ಸುಂಟಿಕೊಪ್ಪ, ಫೆ. ೩: ಸರಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ ಕರೆ ನೀಡಿದರು.

ಸುಂಟಿಕೊಪ್ಪ ಮೀನಾಕ್ಷಮ್ಮ ಮಂಜುನಾಥಯ್ಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಯುವ ಮೋರ್ಚಾ ಸಮಿತಿಯ ವತಿಯಿಂದ ಯುವ ಮೋರ್ಚಾ ಪದಾಧಿಕಾರಿಗಳಿಗೆ ಪದಗ್ರಹಣ ಹಾಗೂ ಯುವ ಮೋರ್ಚಾ ಮತ್ತು ಶಕ್ತಿ ಕೇಂದ್ರದ ವತಿಯಿಂದ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರಿಗೆ ಏರ್ಪಡಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಭಾರತೀಯ ಜನತಾಪಕ್ಷದ ಸಂಘಟನೆಯಲ್ಲಿ ಪ್ರತಿ ಕಾರ್ಯಕರ್ತರ ಸೇವೆ ಪ್ರಮುಖ ವಾಗಿದೆ. ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳ ಸಹಕಾರದಿಂದ ನನ್ನ ಗೆಲುವು ಸಾಧಿಸಲು ಸಾಧ್ಯವಾಯಿತು. ಜನ ಸಾಮಾನ್ಯರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಿ.ಕೆ. ಲೋಕೇಶ್ ಮಾತನಾಡಿ, ಸೇವೆ ಮೂಲಕ ಪಕ್ಷದ ಸಂಘಟನೆ ಬಲಿಷ್ಠಗೊಳಿಸಬೇಕು. ಸರಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬರ ಮನೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಹಿರಿಯ ಕಾರ್ಯಕರ್ತ ಯಂಕನ ಕರುಂಬಯ್ಯ, ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಸೋಮವಾರಪೇಟೆ ಬಿಜೆಪಿ. ಮಂಡಲ ಅಧ್ಯಕ್ಷ ಮನುಕುಮಾರ ರೈ, ಸೋಮವಾರಪೇಟೆ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸುಂಟಿಕೊಪ್ಪ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಮಾಜಿ ಬಿಜೆಪಿ ಮಂಡಲ ಅಧ್ಯಕ್ಷ ಎಂ.ಎನ್. ಕೊಮಾರಪ್ಪ, ಬಿಜೆಪಿ ಓಬಿಸಿ ಉಪಾಧ್ಯಕ್ಷ ಬಿ.ಕೆ. ಮೋಹನ್, ಪಂಚಾಯಿತಿ ಸದಸ್ಯರಾದ ಪಿ.ಆರ್. ಸುನಿಲ್‌ಕುಮಾರ್, ಶಾಂತಿ, ವಸಂತಿ, ಮಾಜಿ ಗ್ರಾ.ಪಂ. ಅಧ್ಯಕ್ಷ ಭವಾನಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ವಾಸುದೇವ ಹಾಗೂ ಬಿಕೆ. ಪ್ರಶಾಂತ್ ಉಪಸ್ಥಿತರಿದ್ದರು.