ಹೆಬ್ಬಾಲೆ, ಫೆ. ೪ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ದುಂಡಳ್ಳಿ ವೀರೇಂದ್ರ ನೇಮಕ ಗೊಂಡಿದ್ದಾರೆ. ನೋಂದಾಯಿತ ಕಟ್ಟಡ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿ ಕಾರ್ಮಿಕರು ಹಾಗೂ ಕಾರ್ಮಿಕ ಇಲಾಖೆಗೆ ಸೇತುವೆಯಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಪಿ. ರಾಜು ಆದೇಶ ಪತ್ರದಲ್ಲಿ ನಿರ್ದೇಶಿಸಿದ್ದಾರೆ.