ಸಮವಸ್ತç ಸಂಹಿತೆ ಕಡ್ಡಾಯ ಪಾಲನೆಗೆ ಸೂಚನೆ
ಬೆಂಗಳೂರು, ಫೆ. ೪: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತç ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬAಧಿಸಿದAತೆ ಇಂದು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು. ಸಮವಸ್ತç ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್‌ಗೆ ಸೂಚಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತç ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಿರ್ಬAಧ ಸಡಿಲಿಸಿದ ರಾಜ್ಯ ಸರಕಾರ
ಬೆಂಗಳೂರು, ಫೆ. ೪: ಕೊರೊನಾ, ಓಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಚಿತ್ರಮಂದಿರ ಮತ್ತು ಜಿಮ್‌ಗಳಿಗೆ ಹೇರಲಾಗಿದ್ದ ಶೇ. ೫೦ರಷ್ಟು ಅಕ್ಯುಪೆನ್ಸಿ ನಿರ್ಬಂಧವನ್ನು ತೆರವುಗೊಳಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ ಸಂಬAಧಿತ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿAದಲೇ ಥಿಯೇಟರ್ ಮತ್ತು ಜಿಮ್ ಪೂರ್ಣ ಪ್ರಮಾಣ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದ್ದು, ಚಲನಚಿತ್ರ ಮಂದಿರದೊಳಗೆ ಹೋಗುವವರು ಕಡ್ಡಾಯ ಮಾಸ್ಕ್ ಧರಿಸಬೇಕು, ಎರಡು ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ. ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗಲು ನಿಷೇಧ ಹೇರಲಾಗಿದೆ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಕಟ್ಟುನಿಟ್ಟಿನ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ವೈದ್ಯಕೀಯ ಸ್ನಾತಕೋತ್ತರ ಪ್ರವೇಶ
ಪರೀಕ್ಷೆ ಮುಂದೂಡಿಕೆಗೆ ಸೂಚನೆ
ನವದೆಹಲಿ, ಫೆ. ೪: ಎನ್‌ಇಇಟಿ ಪಿಜಿ ೨೦೨೨ನ್ನು ೬-೮ ವಾರಗಳ ಕಾಲ ಮುಂದೂಡಲು ರಾಷ್ಟಿçÃಯ ಪರೀಕ್ಷಾ ಮಂಡಳಿ(ಎನ್‌ಬಿಇ)ಗೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಎನ್‌ಇಇಟಿ ಪಿಜಿ ೨೦೨೧ ರ ಕೌನ್ಸಿಲಿಂಗ್ ಹಾಗೂ ಎನ್‌ಇಇಟಿ ಪಿಜಿ-೨೦೨೨ ಏಕಕಾಲಕ್ಕೆ ಬರುವುದರಿಂದ ಅನಾನುಕೂಲವಾಗುತ್ತದೆ ಆದ್ದರಿಂದ ಮಾ.೧೨ ರಂದು ನಿಗದಿಯಾಗಿರುವ ನೀಟ್ ಪರೀಕ್ಷೆಯನ್ನು ಮುಂದೂಡಬೇಕೆAದು ಎಂಬಿಬಿಎಸ್ ಪದವೀದರರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ವಿಭಾಗದ ಸ್ನಾತಕೋತ್ತರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯಲು ನಡೆಯುವ ರಾಷ್ಟಿçÃಯ ಅರ್ಹತ ಹಾಗೂ ಪ್ರವೇಶ ಪರೀಕ್ಷೆ (ಎನ್‌ಇಇಟಿ) ಮಾ. ೧೨ ರಂದು ನಿಗದಿಯಾಗಿದ್ದು, ಹಲವು ಎಂಬಿಬಿಎಸ್ ಪದವೀಧರರು ತಮ್ಮ ಇಂಟರ್ನ್ಶಿಪ್ ಅವಧಿಯನ್ನು ಪೂರ್ಣಗೊಳಿಸಿಲ್ಲ. ಈ ಹಿನ್ನೆಲೆ ಮಾ. ೧೨ ರ ಪರೀಕ್ಷೆಯನ್ನು ಬರೆಯುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ೬ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೌನ್ಸಿಲಿಂಗ್ ಸಮಿತಿಯ ಸದಸ್ಯರು ಹಾಗೂ ವೈದ್ಯಕೀಯ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ. ಬಿ ಶ್ರೀನಿವಾಸ್ ಎನ್‌ಬಿಇಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಂ. ಬಾಜಪೈ ಅವರಿಗೆ ಪತ್ರ ಬರೆದಿದ್ದು, ಎನ್‌ಇಇಟಿ ಪಿಜಿ ೨೦೨೨ ಪರೀಕ್ಷೆ ಹಾಗೂ ಎನ್‌ಇಇಟಿ ಪಿಜಿ ೨೦೨೧ ಕೌನ್ಸಿಲಿಂಗ್ ಏಕಕಾಲದಲ್ಲಿ ಬರುತ್ತಿರುವುದರಿಂದ ಪರೀಕ್ಷೆಗಳನ್ನು ಮುಂದೂಡಬೇಕೆAಬ ಮನವಿ ವೈದ್ಯರಿಂದ ಬರುತ್ತಿದೆ ಎಂದು ಹೇಳಿದ್ದರು. ವಾಸ್ತವಾಂಶಗಳನ್ನು ಪರಿಗಣಿಸಿ ಆರೋಗ್ಯ ಸಚಿವಾಲಯ ಎನ್‌ಇಇಟಿ ಪಿಜಿ ೨೦೨೨ ನ್ನು ೬-೮ ವಾರಗಳ ಕಾಲ ಮುಂದೂಡಲು ಸೂಚಿಸಿದೆ.
ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ
ನವದೆಹಲಿ, ಫೆ. ೪: ಜನವರಿ ೨೬ ರಂದು ದೆಹಲಿಯ ಇಂಡಿಯಾ ಗೇಟ್‌ನಿಂದ ರಾಜಪಥವರಗೆ ನಡೆದಿದ್ದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದ್ದು, ಕರಕುಶಲ ಕಲೆಯ ವೈಭವವನ್ನು ಬಿಂಬಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ೨ನೇ ಸ್ಥಾನ ಲಭ್ಯವಾಗಿದೆ. ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದ್ದು, ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನಕ್ಕೆ ಪಾತ್ರವಾಗಿದೆ. ಅಂತೆಯೇ ‘ವಂದೇ ಭಾರತಮ್' ನೃತ್ಯ ತಂಡವು ವಿಶೇಷ ಬಹುಮಾನ ಪಡೆದಿದ್ದು, ಹುಬ್ಬಳ್ಳಿಯ ಮಯೂರ ಭರತ ನೃತ್ಯ ಅಕಾಡೆಮಿಯ ನೃತ್ಯಪಟುಗಳು ಈ ತಂಡದಲ್ಲಿ ಭಾಗವಹಿಸಿದ್ದರು.
ಇಂಜಿನಿಯರ್ ಅಪಹರಣ ಪ್ರಕರಣ-ಆರೋಪಿಗಳ ಬಂಧನ
ಬೆAಗಳೂರು, ಫೆ. ೪: ಸಿವಿಲ್ ಇಂಜಿನಿಯರ್ ಓರ್ವರನ್ನು ಅಪಹರಣ ಮಾಡಿದ್ದ ೬ ಮಂದಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ವಿವಾದ ಉಂಟಾಗಿ ಸಿವಿಲ್ ಇಂಜಿನಿಯರ್‌ನ್ನು ಅಪಹರಣ ಮಾಡಿ ೩೦ ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿತ್ತು. ಸಂತ್ರಸ್ತರ ನೌಕರರು ಹಾಗೂ ದಾರಿಹೋಕರು ಮಾಹಿತಿ ನೀಡಿದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಅಪಹರಣಗೊಂಡ ವ್ಯಕ್ತಿಯನ್ನು ಮೂರು ಗಂಟೆಗಳಲ್ಲಿ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತರನ್ನು ನಂದಗೋಪಾಲ್ (೩೧) ಸುನಿಲ್ ಸೀನಪ್ಪ (೩೨) ಅಶೋಕ್ ಲಿಂಗಪ್ಪ (೩೧) ವಿಘ್ನೇಶ್ ಅನಂತರಾಮ್ (೨೧) ಮನೋನ್ ಶ್ರೀನಿವಾಸ್ (೨೪) ಶದಾಬ್ ಅಹ್ಮದ್ (೨೪) ಎಂದು ಗುರುತಿಸಲಾಗಿದೆ. ಲಭ್ಯವಾದ ಮಾಹಿತಿಯ ಆಧಾರದಲ್ಲಿ ಪೊಲೀಸರು ಅಪಹರಣಕ್ಕೆ ಬಳಕೆ ಮಾಡಲಾದ ವಾಹನದ ಚಲನವಲನಗಳನ್ನು ಪತ್ತೆ ಮಾಡಿದರು, ಹೊಸಕೋಟೆ ಬಳಿ ತೆರಳುತ್ತಿದ್ದಾಗ ಅಪಹರಣ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ. ಒಡಿಶಾ ಮೂಲದ ಇಂಜಿನಿಯರ್ ಮನಸ್ ಎಂದು ಗುರುತಿಸಲಾಗಿದೆ. ಯಲಹಂಕದಲ್ಲಿ ನಿರ್ಮಾಣ ಸಂಸ್ಥೆಯನ್ನು ಮನಸ್ ನಡೆಸುತ್ತಿದ್ದಾರೆ.
ಯೋಗಿ ಆದಿತ್ಯನಾಥ್ ಉಮೇದುವಾರಿಕೆ
ಗೋರಖ್‌ಪುರ, ಫೆ. ೪: ರಾಷ್ಟçದಾದ್ಯಂತ ತೀವ್ರ ಗಮನ ಸೆಳೆದಿರುವ ಉತ್ತರ ಪ್ರದೇಶದ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚುನಾವಣಾ ರ‍್ಯಾಲಿ ನಂತರ ಅಮಿತ್ ಶಾ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಯೋಗಿ ಆದಿತ್ಯನಾಥ್, ತಮ್ಮ ಉಮೇದುವಾರಿಕೆ ಪತ್ರ ಸಲ್ಲಿಸಿದರು. ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಗೋರಖ್‌ಪುರ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾರ್ಚ್ ೩ ರಂದು ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಜನತೆಯ ಆಶೀರ್ವಾದದೊಂದಿಗೆ ಮತ್ತೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.