ಮಡಿಕೇರಿ, ಫೆ. ೪ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸಂಬAಧ ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಯಿAದ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ವೀರಾಜಪೇಟೆ ತಾಲೂಕು ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ ಬಸವನಹಳ್ಳಿ ದಿಡ್ಡಳ್ಳಿ ಹಾಡಿ ಸರ್ಕಾರಿ ಆಶ್ರಮ ಶಾಲೆಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಂಬAಧಿಸಿದAತೆ ತಾ. ೧೨ ರೊಳಗೆ ತಮ್ಮ ಅಹವಾಲುಗಳ ಅರ್ಜಿಯನ್ನು ಸಂಬAಧಪಟ್ಟ ನಾಡಕಚೇರಿ, ತಾಲೂಕು ಕಚೇರಿಗೆ ಸಲ್ಲಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಕೋರಿದ್ದಾರೆ.