ನಾಪೋಕ್ಲು, ಫೆ. ೪: ಸಮೀಪದ ಬಲ್ಲಮಾವಟಿ ಗ್ರಾಮದ ದವಸ ಬಂಡಾರದ ಅಧ್ಯಕ್ಷರಾಗಿ ಬೊಟ್ಟೊಳಂಡ ಜಾನಕ್ಕಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಂಘದ ಸಭಾಂಗಣದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಉಪಾಧ್ಯಕ್ಷರಾಗಿ ಕೊಟೇರ ಅಶೋಕ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿಯಗಿ ಹೊಸೊಕ್ಲು ಭರತ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನಿರ್ದೇಶಕರಾಗಿ ೯ ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.