ಸುಂಟಿಕೊಪ್ಪ, ಫೆ. ೪: ಫ್ರೆಂಡ್ಸ್ ಯೂತ್ ಕ್ಲಬ್ ನಾಕೂರು-ಕಾನ್‌ಬೈಲ್ ಇವರ ೨೨ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ತಾ. ೨೭ ರಂದು ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ಮೇಳ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಂಬೆಕಲ್ ಚಂದ್ರಶೇಖರ್ ತಿಳಿಸಿದ್ದಾರೆ.
ತಾ. ೨೭ ರಂದು ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ. ಸಂಜೆ ಶಾಲಾ ವೇದಿಕೆಯಲ್ಲಿ ಡ್ಯಾನ್ಸ್ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಸ್ತೆ ಓಟದಲ್ಲಿ ಪಾಲ್ಗೊಂಡು ಬಹುಮಾನ ಪಡೆಯುವ ಕ್ರೀಡಾಪಟುವಿಗೆ ಆಕರ್ಷಕ ಟ್ರೋಫಿ, ನಗದು ಬಹುಮಾನ ನೀಡಲಾಗುವುದು.
ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ರೂ ೧೫,೦೦೦ ನಗದು, ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ ೧೦,೦೦೦ ನಗದು, ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ. ೫,೦೦೦ ನಗದು, ಆಕರ್ಷಕ ಟ್ರೋಫಿ ನೀಡುವುದಾಗಿ ಅವರು ತಿಳಿಸಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾ ತಂಡಗಳು ತಾ. ೨೭ ರಂದು ೧೦ ಗಂಟೆಗೆ ಮುಂಚಿತವಾಗಿ ಮೈದಾನದಲ್ಲಿ ಹಾಜರಿರುವಂತೆ, ಡ್ಯಾನ್ಸ್ ಮೇಳದಲ್ಲಿ ಭಾಗವಹಿಸುವವರು ತಾ. ೨೬ ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವAತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ೯೪೮೦೮೪೦೧೫೬, ೯೪೪೯೦೯೨೪೦೫, ೮೨೭೭೩೯೪೧೧೭, ೯೯೦೨೯೬೩೨೮೮, ೮೭೬೨೬೨೩೨೨೮ ಸಂಖ್ಯೆಗಳಿಗೆ ಸಂಪರ್ಕಿಸುವAತೆ ತಿಳಿಸಲಾಗಿದೆ.