ಮಡಿಕೇರಿ, ಫೆ. ೪: ಜಿಲ್ಲೆಯಲ್ಲಿ ೨೦೨೧-೨೨ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಸಂಬAಧ ಸಂಬAಧಿಸಿದ ನೋಂದಣಿ ಕೇಂದ್ರಗಳಲ್ಲಿ ಒಟ್ಟು ೮೮೪ ರೈತರು ಭತ್ತ ಖರೀದಿಗೆ ನೋಂದಣಿ ಮಾಡಿಕೊಂಡಿದ್ದಾರೆ.
ಅಕ್ಕಿ ಗಿರಣಿಗೆ ಸರ್ಕಾರ ನಿಗಧಿಪಡಿಸಿರುವ ನಿರ್ವಹಣಾ ವೆಚ್ಚವನ್ನು ಪರಿಷ್ಕರಣೆ ಮಾಡಲು ಸಂಬAಧಿಸಿದ ಅಕ್ಕಿ ಗಿರಣಿಗಳವರು ಕೋರಿದ್ದಾರೆ. ಇದರಿಂದಾಗಿ ಭತ್ತ ಖರೀದಿ ಪ್ರಕ್ರಿಯೆ ವಿಳಂಭವಾಗಿರುತ್ತದೆ. ದರ ಪರಿಷ್ಕರಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆಯ ಹಂತದಲ್ಲಿದೆ. ಈ ಸಮಸ್ಯೆ ಬಗೆಹರಿದ ಕೂಡಲೇ ಭತ್ತ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಲಾಗುವುದು. ಜಿಲ್ಲೆಯ ಭತ್ತ ಖರೀದಿ ಪ್ರಕ್ರಿಯೆಗೆ ನೋಂದಾಯಿಸಿಕೊAಡಿರುವ ರೈತರು ಸಹಕರಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.