ಸೋಮವಾರಪೇಟೆ,ಫೆ.೪: ಸರ್ಕಾರಿ ಪೈಸಾರಿ ಮತ್ತು ಊರುಗುಪ್ಪೆ ಜಾಗದಲ್ಲಿ ಕಳೆದ ಅನೇಕ ದಶಕಗಳಿಂದ ಮನೆಗಳನ್ನು ಕಟ್ಟಿಕೊಂಡು ಸೂಕ್ತ ದಾಖಲೆಗಳಿಲ್ಲದೇ ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದ ಮಂದಿಗೆ ಸರ್ಕಾರದ ಕಂದಾಯ ಇಲಾಖೆ ಮೂಲಕ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈವರೆಗೆ ೧೭೬೫ ಮಂದಿಗೆ ಹಕ್ಕು ಪತ್ರ ವಿತರಿಸಲಾಗಿದೆ.

ಈವರೆಗೆ ಒಟ್ಟು ೮೮೧೦ ಅರ್ಜಿಗಳು ಸಲ್ಲಿಕೆಯಾಗಿದ್ದು, ೨೨೮೨ ಮಂದಿಯ ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. ಅರಣ್ಯ, ಡೀಮ್ಡ್ ಫಾರೆಸ್ಟ್, ಗೋಮಾಳ, ಊರುಡುವೆ, ಸಿ ಮತ್ತು ಡಿ ಜಾಗಗಳ ೬೧೦೪ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ೨೨೮೨ ಮಂಜೂರಾತಿ ಪ್ರಕರಣಗಳ ಪೈಕಿ ೧೭೬೫ ಮಂದಿಗೆ ಈಗಾಗಲೇ ಹಕ್ಕುಪತ್ರ ವಿತರಿಸಲಾಗಿದ್ದು, ೫೧೭ ಮಂದಿಗೆ ಸದ್ಯದಲ್ಲೇ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಕಂದಾಯ ಇಲಾಖೆಯಲ್ಲಿ ಸದ್ಯ ೪೨೪ ಅರ್ಜಿಗಳು ಬಾಕಿ ಉಳಿದಿವೆ.

ಸೋಮವಾರಪೇಟೆ ಹೋಬಳಿಗೆ ಸಂಬAಧಿಸಿದAತೆ ೧೮೫೯ ಅರ್ಜಿಗಳ ಪೈಕಿ ೭೨೭ ಅರ್ಜಿಗಳಿಗೆ ಮಂಜೂರಾತಿ ನೀಡಿದ್ದು, ೧೦೧೫ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ೬೪೨ ಮಂದಿಗೆ ಹಕ್ಕುಪತ್ರ ನೀಡಿದ್ದು, ೮೫ ಮಂದಿಯ ಹಕ್ಕುಪತ್ರಗಳು ವಿತರಣೆಗೆ ಸಿದ್ಧಗೊಂಡಿವೆ. ೧೧೭ ಅರ್ಜಿಗಳು ಬಾಕಿ ಉಳಿದಿವೆ.

ವಿಭಜಿತ ಸೋಮವಾರಪೇಟೆ ತಾಲೂಕಿಗೆ ಒಳಪಟ್ಟಿರುವ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಗ್ರಾಮಗಳಿಂದ ೭೫೭ ಅರ್ಜಿಗಳು ಸಲ್ಲಿಕೆಯಾಗಿದ್ದು, ೨೭೩ ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. ೪೭೩ ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ೨೭೩ ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. ೧೧ ಅರ್ಜಿಗಳ ವಿಲೇವಾರಿ ಬಾಕಿಯಿದೆ.

ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಸಂಬAಧಿಸಿದAತೆ ೧೦೭೬ ಅರ್ಜಿಗಳು ಸಲ್ಲಿಕೆಯಾಗಿದ್ದು, ೨೪೧ ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. ೮೦೫ ಅರ್ಜಿಗಳನ್ನು ತಿರಸ್ಕರಿಸಿದ್ದು, ೨೨೨ ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ೧೯ ಕಡಿಮೆ ಅವಧಿಯಲ್ಲಿ ದಾಖಲೆಯ ಹಕ್ಕುಪತ್ರ ವಿತರಣೆ

ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಕಳೆದ ೨೦೧೬ರಿಂದಲೇ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದರೂ ಈಗಿನ ತಹಶೀಲ್ದಾರ್ ಆರ್. ಗೋವಿಂದರಾಜು ಅವರು ಅಧಿಕಾರ ವಹಿಸಿಕೊಂಡ ನಂತರ ಈ ಬಗೆಗಿನ ಪ್ರಕ್ರಿಯೆಗೆ ವೇಗ ನೀಡಿದ್ದರ ಪರಿಣಾಮ, ದಾಖಲೆ ಪ್ರಮಾಣದಲ್ಲಿ ಹಕ್ಕುಪತ್ರ ವಿತರಿಸಲು ಸಾಧ್ಯವಾಗಿದೆ. ೨೦೧೬ರಿಂದ ೨೦೧೮ರವರೆಗೆ ೪೫೧ ಮಂದಿಗೆ ಮಾತ್ರ ಹಕ್ಕು ಪತ್ರ ಲಭಿಸಿತ್ತು. ೨೦೧೯ರ ಆರಂಭದಲ್ಲಿ ತಾಲೂಕಿನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಗೋವಿಂದರಾಜು ಅವರು ತಮ್ಮ ಅವಧಿಯಲ್ಲಿ ೧೮೩೧ ಮಂದಿಗೆ ಹಕ್ಕುಪತ್ರ ಒದಗಿಸಲು ಶ್ರಮಿಸಿದ್ದಾರೆ. ಈ ಪೈಕಿ ಈಗಾಗಲೇ ೧೭೬೫ ಮಂದಿಗೆ ದಾಖಲೆ ಹಸ್ತಾಂತರಿಸಲಾಗಿದ್ದು, ೫೧೭ ಮಂದಿಯ ಹಕ್ಕುಪತ್ರ ವಿತರಣೆಗೆ ಸಿದ್ಧವಾಗಿದೆ. ಕಂದಾಯ ಇಲಾಖೆಯ ಕಾರ್ಯಗಳಿಗೆ ಹೊಸತನ ಹಾಗೂ ವೇಗ ನೀಡಿದ್ದರ ಪರಿಣಾಮ ಕಡಿಮೆ ಅವಧಿಯಲ್ಲಿ ಹೆಚ್ಚು ಹಕ್ಕುಪತ್ರಗಳನ್ನು ವಿತರಿಸಲು ಸಾಧ್ಯವಾಗಿದೆ.

ಇಲಾಖೆಯ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಶಾಸಕರ ಸಹಕಾರದಿಂದ ಬಡ ಫಲಾನುಭವಿಗಳಿಗೆ ಶೀಘ್ರವಾಗಿ ಹಕ್ಕುಪತ್ರ ವಿತರಿಸಲು ಸಾಧ್ಯವಾಯಿತು. ಉಳಿದಿರುವ ೩೪೪ ಮಂದಿ ಹಣ ಪಾವತಿಸಿದರೆ, ಶಾಸಕರ ಸಮ್ಮುಖದಲ್ಲಿ ಫಲಾನುಭವಿಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸಲಾಗುವುದು ಎಂದು ತಹಶೀಲ್ದಾರ್ ಗೋವಿಂದರಾಜು ‘ಶಕ್ತಿ’ಯೊಂದಿಗೆ ಅಭಿಪ್ರಾಯಿಸಿದ್ದಾರೆ.ಹಣ ಪಾವತಿಯಾಗಿದ್ದು, ಶಾಸಕರ ಅಧ್ಯಕ್ಷತೆಯಲ್ಲಿ ಹಕ್ಕುಪತ್ರ ವಿತರಿಸಲಾಗುವುದು. ಉಳಿದ ೩೪೪ ಪ್ರಕರಣಗಳಿಗೆ ಸಂಬAಧಿಸಿದAತೆ ಫಲಾನುಭವಿಗಳು ಹಣ ಪಾವತಿಸಿಲ್ಲ. ಸರ್ಕಾರ ನಿಗದಿಪಡಿಸಿದ ಹಣ ಪಾವತಿಸಿದ ತಕ್ಷಣ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ತಾಲೂಕು ತಹಶೀಲ್ದಾರ್ ಗೋವಿಂದರಾಜು ‘ಶಕ್ತಿ’ಗೆ ತಿಳಿಸಿದ್ದಾರೆ.

ಸರ್ಕಾರವು ಕಂದಾಯ ಇಲಾಖೆ ಮೂಲಕ ೨೦೧೩-೧೪ರಲ್ಲಿ ಹಕ್ಕುಪತ್ರ ವಿತರಣೆಗೆ ಆದೇಶ ಹೊರಡಿಸಿದ್ದು, ಸೋಮವಾರಪೇಟೆ ತಾಲೂಕಿನಲ್ಲಿ ೨೫.೦೨.೨೦೧೬ರಿಂದ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

೯೪ ಸಿಸಿ ಅಡಿಯಲ್ಲಿ ೪೫೧ ಅರ್ಜಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಮನೆಕಟ್ಟಿಕೊಂಡಿರುವ ಮಂದಿಗೆ ಹಕ್ಕುಪತ್ರ ಒದಗಿಸಲು ಸರ್ಕಾರ ಜಾರಿಗೆ ತಂದಿರುವ ೯೪ ಸಿಸಿ ನಮೂನೆಯಲ್ಲಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಸಂಬAಧಿಸಿದAತೆ ೪೫೧ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ೨೧೬ ಮಂದಿಯ ಅರ್ಜಿ ತಿರಸ್ಕೃತವಾಗಿದೆ. ೧೭೮ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ೩೭ ಮಂದಿಗೆ ಹಕ್ಕುಪತ್ರ ವಿತರಿಸಲು ಸಿದ್ಧತೆ ನಡೆಸಲಾಗಿದ್ದು, ೨೦ ಮಂದಿಯ ಅರ್ಜಿ ಪರಿಶೀಲನಾ ಹಂತದಲ್ಲಿದೆ.

ಇನ್ನು ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿರುವ ೯೯೩ ಪ್ರಕರಣಗಳನ್ನು ಕಂದಾಯ ಇಲಾಖೆಯಲ್ಲಿ ತಿರಸ್ಕರಿಸಲಾಗಿದೆ. ಇಂತಹ ಪ್ರಕರಣಗಳನ್ನು ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ. ಅರಣ್ಯಕ್ಕೆ ಸೇರಿದ ಜಾಗದಲ್ಲಿ ಮನೆಕಟ್ಟಿಕೊಂಡಿರುವ ಪ್ರಕರಣಗಳನ್ನು ಅರಣ್ಯ ಹಕ್ಕು ಕಾಯ್ದೆಯ ಮೂಲಕ ಬಗೆಹರಿಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಗೆ ತಿಳಿಸಲಾಗಿದೆ. ಅರಣ್ಯ ಹಕ್ಕು ಸಮಿತಿಯ ಮೂಲಕ ಇಂತಹ ಅರ್ಜಿಗಳು ಇತ್ಯರ್ಥವಾಗಬೇಕಿವೆ. - ವಿಜಯ್ ಹಾನಗಲ್