ಮಡಿಕೇರಿ, ಫೆ. ೪ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ವಿದ್ಯಾರ್ಥಿ ವೇತನ ಕಾರ್ಯಕ್ರಮ, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಮೆಟ್ರಿಕ್ ಪೂರ್ವ ವಿಶೇಷ ಪ್ರೋತ್ಸಾಹಧನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಯೋಜನೆ, ಪಿ.ಎಚ್.ಡಿ ಅಧ್ಯಯನಕ್ಕೆ ವ್ಯಾಸಂಗ ವೇತನ, ಫೇಲೋಶಿಪ್, ಡಿ. ದೇವರಾಜು ಅರಸು ಪ್ರತಿಭಾ ಪುರಸ್ಕಾರ, ನಿಲಯಾರ್ಥಿಗಳಿಗೆ ಪ್ರೋತ್ಸಾಹಧನ, ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ನೀಡುವ ಕಾರ್ಯಕ್ರಮ ಇದೆ ಎಂದು ಬಿಸಿಎಂ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.
ತರಬೇತಿ ಕಾರ್ಯಕ್ರಮಗಳು: ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಮತ್ತು ಪ್ರೋತ್ಸಾಹಧನ. ಐ.ಐ.ಟಿ., ಐ.ಐ.ಎಂ., ಐ.ಐ.ಎಸ್.ಸಿ. ಮುಂತಾದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತರಬೇತಿ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ಭತ್ಯೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ ದೂ.ಸಂ. ೦೮೨೭೨-೨೯೫೬೨೮, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿ ತಾಲೂಕು ದೂ.ಸಂ. ೦೮೨೭೨-೨೯೮೦೩೭, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸೋಮವಾರಪೇಟೆ ತಾಲೂಕು ದೂ.ಸಂ. ೦೮೨೭೬-೨೮೪೮೨೦, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ವೀರಾಜಪೇಟೆ ತಾಲೂಕು ದೂ.ಸಂ. ೦೮೨೭೪-೨೪೯೨೧೧ ನ್ನು ಸಂಪರ್ಕಿಸಬಹುದು ಎಂದು ಎನ್.ಮಂಜುನಾಥ್ ತಿಳಿಸಿದ್ದಾರೆ.