ಮಡಿಕೇರಿ, ಫೆ. ೫: ನೀಡಿರುವ ಜವಾಬ್ದಾರಿಯನ್ನು ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಸಮರ್ಪಕ ವಾಗಿ ನಿರ್ವಹಣೆ ಮಾಡದಿರುವು ದರಿಂದ ಪಕ್ಷ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಅತೃಪ್ತಿ ವ್ಯಕ್ತಪಡಿಸಿದರು.
ನಗರದ ಜೆಡಿಎಸ್ ಪಕ್ಷದ ಕಚೇರಿ ಯಲ್ಲಿ ಪಕ್ಷದ ಸದಸ್ಯತ್ವ ನೋಂದಣಿ, ಹೊಸ ಪದಾಧಿಕಾರಿಗಳ ನೇಮಕ ಸಂಬAಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೆಡಿಎಸ್ ಜಿಲ್ಲೆಯಲ್ಲಿ ಗಟ್ಟಿಯಾಗಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕೊಡಗಿಗೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ತ್ವರಿತ ಹಾಗೂ ಪೂರಕವಾಗಿ ಸ್ಪಂದಿಸಿದ್ದಾರೆ. ಅವರ ಸಾಧನೆಗಳ ಬಗ್ಗೆ ಮತದಾರರಿಗೆ ತಿಳಿಸುವ ಪ್ರಯತ್ನ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
ಪಕ್ಷ ಸಂಘಟನೆಗೆ ಶ್ರಮಿಸಿದರೆ ಮಾತ್ರ ರಾಜಕೀಯವಾಗಿ ಬೆಳವಣಿಗೆ ಸಾಧಿಸಲು ಸಾಧ್ಯ. ಗ್ರಾಮಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ತಾ.ಪಂ ಹಾಗೂ ಜಿ.ಪಂ. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆಲುವಿಗೆ ಪಣತೊಡಬೇಕು ಎಂದ ಅವರು, ಮುಂದಿನ ಚುನಾವಣೆಯಲ್ಲಿ ಎಲ್ಲಾ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಗೆಲ್ಲುವ ಸ್ಥಳಗಳಲ್ಲಿ ಮಾತ್ರ ಸ್ಪರ್ಧಿಗೆ ಅವಕಾಶ ನೀಡಿ ಸಂಘಟನಾತ್ಮಕವಾಗಿ ಕೆಲಸ ಮಾಡಲಾಗುವುದು ಎಂದರು.
ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಖ್ ಖಾನ್ ಮಾತನಾಡಿ, ಪಕ್ಷ ಸಂಘಟನೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಇತ್ತೀಚಿನ ದಿನಗಳಲ್ಲಿ ಕಾರ್ಯಕರ್ತರು ಹುಮ್ಮಸ್ಸು ಕಳೆದುಕೊಂಡAತಿದೆ. ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಪಕ್ಷ ಸಂಘಟನೆ ಗುರಿಯಾಗಿರಬೇಕೆಂದು ಹೇಳಿದರು.
ಸಭೆಯಲ್ಲಿ ಪ್ರಮುಖರಾದ ನಾಪಂಡ ಮುತ್ತಪ್ಪ, ರಾಜ್ಯ ಉಪಾಧ್ಯಕ್ಷ ಎಂ.ಎA. ಶರೀಫ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಅಲಿ, ಜಿಲ್ಲಾ ಉಪಾಧ್ಯಕ್ಷ ಪಾಣತಲೆ ವಿಶ್ವನಾಥ್, ಯೂಸಫ್, ಶಿವದಾಸ್, ಕಾರ್ಯಾಧ್ಯಕ್ಷ ಮತೀನ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ, ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ರಾಮಚಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.