ಪಾಲಿಬೆಟ್ಟ, ಫೆ. ೫: ಹಾಡಹಗಲೇ ಹುಲಿಯೊಂದು ಹಸುವಿನ ಮೇಲೆ ದಾಳಿ ಮಾಡಿ ಬಲಿ ತೆಗೆದುಕೊಂಡಿ ರುವ ಘಟನೆ ಪಾಲಿಬೆಟ್ಟದ ಕ್ರಿಸ್ಟಲ್ ಕಾಫಿ ತೋಟದಲ್ಲಿ ನಡೆದಿದೆ.

ಹುಲಿ ದಾಳಿಗೆ ಹಸು ಬಲಿಯಾಗಿರುವ ವಿಷಯ ತಿಳಿದ ಕಾರ್ಮಿಕರು ಹಾಗೂ ಸಾರ್ವಜನಿಕರು ಭಯಭೀತರಾಗಿದ್ದು ಕೆಲಸಕ್ಕೆ ತೆರಳಲು ಹಿಂದೇಟು ಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಹುಲಿ ಹಾವಳಿಯಿಂದ ಸಾರ್ವಜನಿಕರು ನಡೆದಾಡಲು ಭಯ ಪಡುವಂತಾಗಿದ್ದು, ಕೂಡಲೇ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸದಿದ್ದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಹುಲಿಯ ಚಲನವಲನ ಪತ್ತೆಹಚ್ಚಲು ಕ್ಯಾಮೆರಾ ಅಳವಡಿಸಿದ್ದಾರೆ.