ಮಡಿಕೇರಿ, ಫೆ. ೫: ಕೊಡಗು ಚಾನಲ್ ಮೀಡಿಯಾ ಕಪ್ ಕ್ರಿಕೆಟ್ ಪಂದ್ಯಾವಳಿ ತಾ.೬ರಂದು (ಇಂದು) ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಕೊಡಗು ಚಾನಲ್‌ನ ೧೩ನೇ ವಾರ್ಷಿಕೋತ್ಸವದ ಅಂಗವಾಗಿ ಪತ್ರಕರ್ತರಿಗಾಗಿ ಪಂದ್ಯಾವಳಿ ಆಯೋಜಿಸಿದ್ದು, ಭಾನುವಾರ ಬೆಳಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಸಂಪಾದಕ ಜಿ.ವಿ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.