ಮಡಿಕೇರಿ, ಫೆ. ೫: ಸಾಂಸ್ಕೃತಿಕ ಕಾರ್ಯಕ್ರಮಗಳಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವದರಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಲಕ್ಷಿö್ಮ ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು, ರಾಷ್ಟಿçÃಯ ಸೇವಾ ಯೋಜನಾ ಘಟಕ, ಕಾವೇರಿ ಕಲಾ ವೃಂದ ಇವರುಗಳ ಸಂಯುಕ್ತಾಶ್ರಯ ದಲ್ಲಿ ರಾಷ್ಟಿçÃಯ ಯುವ ದಿನ ಹಾಗೂ ಯುವ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವದರಿಂದ ಕ್ರಿಯಾಶೀಲರಾಗಿರಬಹುದಲ್ಲದೆ, ವೇದಿಕೆಗಳಲ್ಲೂ ಅವಕಾಶ ಸಿಗುತ್ತದೆ, ಭವಿಷ್ಯ ರೂಪಿಸಿಕೊಳ್ಳಲೂ ಸಹಕಾರಿ ಯಾಗಲಿದೆ ಎಂದು ಹೇಳಿದರು. ಪ್ರಸ್ತುತ ವಿದ್ಯಾರ್ಥಿಗಳು ಮೊಬೈಲ್ ಗಳಲ್ಲಿ ಮುಳುಗಿ ಹೋಗುತ್ತಿದ್ದು, ಮೊಬೈಲ್ ಬಿಟ್ಟು ಉತ್ತಮ ಪ್ರಜೆಗಳಾಗಿ ಬಾಳುವಂತೆ ಸಲಹೆ ಮಾಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾಧಿಕಾರಿ ಜಿ ಗುರುಸ್ವಾಮಿ ಯುವ ಸಪ್ತಾಹದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಕಾಲೇಜು ಪ್ರಾಂಶುಪಾಲ ಜವರಪ್ಪ, ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇ. ಡಾ. ಬಿ.ರಾಘವ ಪಾಲ್ಗೊಂಡಿದ್ದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಅಧ್ಯಕ್ಷ ನವೀನ್ ದೇರಳ ಸ್ವಾಗತಿಸಿದರೆ, ಕಾರ್ಯದರ್ಶಿ ಕೊಕ್ಕಲೆ ಗಣೇಶ್ ನಿರೂಪಿಸಿ, ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.