ವೀರಾಜಪೇಟೆ, ಫೆ. ೬: ಸರ್ಕಾರದಿಂದ ಬಡ ಕುಟುಂಬಗಳಿಗೆ ನೀಡುತ್ತಿರುವ ಹಕ್ಕುಪತ್ರವನ್ನು ಪಡೆದು ಕೊಂಡವರು ಯಾರು ಮಾರಾಟ ಮಾಡಬಾರದು. ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸ್ವಾಭಿಮಾನಿ, ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ವೀರಾಜಪೇಟೆ ಪುರಭವನದಲ್ಲಿ ಆಯೋಜಿಸಿದ್ದ ಅಮ್ಮತ್ತಿ ಹೋಬಳಿ ಹಾಗೂ ವೀರಾಜಪೇಟೆ ಹೋಬಳಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ೧,೦೦೩ ಕುಟುಂಬಗಳಿಗೆ ಹಕ್ಕುಪತ್ರ ಗಳನ್ನು ವಿತರಿಸಲಾಗಿದ್ದು, ಇನ್ನು ಮನೆ ನಿವೇಶನ ಇರುವ ಬಡ ಕುಟುಂಬಗಳು ಮಾರ್ಚ್ ೩೧ ರೊಳಗೆ ಅರ್ಜಿ ಸಲ್ಲಿಸಿದರೆ ಅಂತ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವುದಾಗಿ ಶಾಸಕ ಬೋಪಯ್ಯ ತಿಳಿಸಿದರು.
ವೀರಾಜಪೇಟೆ ತಹಶೀಲ್ದಾರ್ ಆರ್. ಯೋಗಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬರಿಗೂ ವಾಸಿಸಲು ಮನೆಯ ಅವಶ್ಯವಿದೆ.
ಆದ್ದರಿಂದ ಮನೆ ನಿವೇಶನ ಇರುವವರು ಹಕ್ಕುಪತ್ರ ಪಡೆದುಕೊಂಡು ಸರಕಾರದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗಿರೀಶ್ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಪಟ್ರಪಂಡ ರಘು ನಾಣಯ್ಯ, ಭೂ ದಾಖಲೆಗಳ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗಿರೀಶ್ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಪಟ್ರಪಂಡ ರಘು ನಾಣಯ್ಯ, ಭೂ ದಾಖಲೆಗಳ ಅಧೀಕ್ಷಕ ಬಿ. ಅರುಣ್‌ಕುಮಾರ್, ಕಂದಾಯ ಪರಿವೀಕ್ಷಕ ಹರೀಶ್ ಮತ್ತು ಬಾನುಪ್ರಿಯಾ ಅವರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಹಾಗೂ ಅಮ್ಮತ್ತಿ ಹೋಬಳಿಯ ೬೪ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.