ಮಡಿಕೇರಿ, ಫೆ. ೬: ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರು ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ತಾಲೂಕು ಯೋಜನಾ ಸಹಾಯಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರ ಹುದ್ದೆಗೆ ಬಿ.ಎ., ಬಿ.ಕಾಂ, ಸಮಾಜ ಕಾರ್ಯ, ರೂರಲ್ ಮ್ಯಾನೇಜ್‌ಮೆಂಟ್ ಇವುಗಳಲ್ಲಿ ಯಾವುದಾದರೊಂದು ಪದವಿ ಪಡೆದಿರಬೇಕು.

ಸರ್ಕಾರಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಟ ೧ ವರ್ಷ ಕೆಲಸ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಡಾಟಾ ಎಂಟ್ರಿ, ಎಂ.ಎಸ್. ಆಫೀಸ್ ಬಳಕೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು. ಮಾಹೆಯಾನ ರೂ. ೨೦ ಸಾವಿರ ಗೌರವಧನ ನೀಡಲಾಗುವುದು.

ತಾಲೂಕು ಯೋಜನಾ ಸಹಾಯಕರ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಸ್ಥಳೀಯ ಸಂಸ್ಥೆಗಳೊAದಿಗೆ ಕನಿಷ್ಟ ೧ ವರ್ಷ ಕೆಲಸ ನಿರ್ವಹಿಸಿದ ಅನುಭವ, ಕನ್ನಡ ಭಾಷೆಯಲ್ಲಿ ಪ್ರಾವಿಣ್ಯತೆ, ಕ್ಷೇತ್ರ ಕಾರ್ಯ ನಿರ್ವಹಣೆ ಮತ್ತು ಸ್ಥಳೀಯ ಅಭ್ಯರ್ಥಿ ಕಡ್ಡಾಯ. ಮಾಹೆಯಾನ ರೂ. ೧೫ ಸಾವಿರ ಗೌರವಧನ ನೀಡಲಾಗುವುದು.

ನೇಮಕಾತಿಯು ೧೧ ತಿಂಗಳ ಅವಧಿಯಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ನವೀಕರಿಸಲಾಗುವುದು. ಅರ್ಹ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು ಮತ್ತು ಅನುಭವ ಪ್ರಮಾಣ ಪತ್ರಗಳೊಂದಿಗೆ ತಾ. ೧೫ ರ ಸಂಜೆ ೫ ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ (ದೂ. ೦೮೨೭೨-೨೯೮೩೭೯) ಇಲ್ಲಿಗೆ ಖುದ್ದಾಗಿ ಸಲ್ಲಿಸುವಂತೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದ್ದಾರೆ.