ಭಾಗಮಂಡಲ, ಫೆ. ೬: ತಾವೂರು ಗ್ರಾಮದ ಮಹಿಷಾಸುರಮರ್ದಿನಿ ದೇವಾಲಯದ ಆಡಳಿತ ಮಂಡಳಿ ವತಿಯಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಮಂಡೇಪAಡ ಸುಜಾ ಕುಶಾಲಪ್ಪ ಅವರನ್ನು ಅಭಿನಂದಿಸಿ, ಗೌರವಿಸಲಾಯಿತು. ಸುಜಾ ಕುಶಾಲಪ್ಪ ಮಾತನಾಡಿ, ದೇವಾಲಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಹೊಸಗದ್ದೆ ಭಾಸ್ಕರ, ಕಾರ್ಯದರ್ಶಿ ಯದುಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಮಿತ, ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್, ಡಾ. ಕುಷ್ವಂತ್, ಪಿ.ಎಂ. ರಾಜೀವ್, ಅಮೆ ಬಾಲಕೃಷ್ಣ, ಗೌಡ ಸಮಾಜದ ಅಧ್ಯಕ್ಷ ಪಳಂಗಪ್ಪ ಸೇರಿದಂತೆ ಇನ್ನಿತರರು ಇದ್ದರು.