ಕೂಡಿಗೆ, ಫೆ. ೭: ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಲು ಹಾಗೂ ದೌರ್ಜನ್ಯ ತಡೆಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ "ದೌರ್ಜನ್ಯದಿಂದ ಮುಕ್ತಿ" ಅಭಿಯಾನದಂತಹ ಕಾರ್ಯಕ್ರಮ ರೂಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಸ್ತಿçà ಶಕ್ತಿ ಒಕ್ಕೂಟ ಹಾಗೂ ಗ್ರಾಮ ಪಂಚಾಯಿತಿ ಇವರ ವತಿಯಿಂದ ಕೂಡ್ಲೂರಿನ ಅಂಗನವಾಡಿಯಲ್ಲಿ ಆಯೋಜಿಸಿದ್ದ ದೌರ್ಜನ್ಯ ಮುಕ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಸಾಂತ್ವನ ಕೇಂದ್ರ, ಮಹಿಳಾ ಸಹಾಯವಾಣಿ ತೆರೆಯಲಾಗಿದೆ. ಸಮಾಜದಲ್ಲಿ ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಈ ಸಹಾಯವಾಣಿಗಳ ಮೂಲಕ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ಮಾಹಿತಿ ನೀಡಬಹುದು. ಒಂದು ವೇಳೆ ಸಹಾಯವಾಣಿಯಲ್ಲಿ ದೌರ್ಜನ್ಯಗಳ ಕುರಿತ ಮಾಹಿತಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.ವಕೀಲ ಮೋಹನ್ ಮಾತನಾಡಿ, ಮಹಿಳೆಯರ ಹಕ್ಕುಗಳನ್ನು ಪಡೆಯಲು ಮತ್ತು ದೌರ್ಜನ್ಯದಿಂದ ಮುಕ್ತರಾಗಲು ಶಿಕ್ಷಣದ ಜತೆಗೆ ಕಾನೂನು ಅರಿವು ಅಗತ್ಯ. ಕೌಟುಂಬಿಕ ದೌರ್ಜನ್ಯ ಕಾಯಿದೆಯ ಬಗ್ಗೆ ತಿಳಿದುಕೊಳ್ಳಬೇಕು. ಅಗತ್ಯಬಿದ್ದಾಗ ಅದನ್ನು ಬಳಸಿಕೊಂಡು ದೌರ್ಜನ್ಯ ಮುಕ್ತರಾಗಬೇಕು ಎಂದರು.
ಸ್ತಿçà ಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹಾನ ಸುಲ್ತಾನ್ ಮಾತನಾಡಿ, ದೌರ್ಜನ್ಯದಿಂದ ಸಂಕಷ್ಟಗಳಿಗೆ ಸಿಲುಕಿರುವ ಅಸಹಾಯಕ ಮಹಿಳೆಯರು ಸಾಂತ್ವನ ಕೇಂದ್ರವನ್ನು ಸಂಪರ್ಕಿಸಬಹುದು.
ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಮಹಿಳಾ ಸಹಾಯವಾಣಿಗೆ ಕರೆಮಾಡಿ ಸಲಹೆ ಹಾಗೂ ನೆರವು ಪಡೆಯಬಹುದು. ನೇರವಾಗಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಅಧಿಕಾರಿಗಳನ್ನು ಅಥವಾ ಸಮೀಪದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಈ ಸಂದರ್ಭ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಭಾರತಿ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತೇಜಶ್ರೀ, ಸ್ತಿçà ಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷೆ ಸುಮತಿ, ಕಾರ್ಯದರ್ಶಿ ಹೇಮ, ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ, ಟಿ.ಜಿ. ಪ್ರೇಮ್ ಕುಮಾರ್, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತಿçà ಶಕ್ತಿ ಸಂಘದ ಪಧಾದಿಕಾರಿಗಳು ಹಾಜರಿದ್ದರು.
ಈ ಸಂದರ್ಭ ಕೊರೊನಾ ಸಂದರ್ಭದಲ್ಲಿ ಕಿಟ್ ವಿತರಣೆಯನ್ನು ಮಾಡಿದ ಕೂಡ್ಲೂರು ಗ್ರಾಮದ ಹಿರಿಯ ಸ್ತಿçà ಶಕ್ತಿ ಒಕ್ಕೂಟದ ಸದಸ್ಯೆ ಮಂಜುಳಾ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು