ಸೋಮವಾರಪೇಟೆ, ಫೆ.೬: ಭಾರತವನ್ನು ೨೦೨೫ರೊಳಗೆ ಕ್ಷಯ ಮುಕ್ತಗೊಳಿಸಲು ಕೇಂದ್ರ ಸರ್ಕಾರವು ರಾಷ್ಟಿçÃಯ ಕಾರ್ಯತಂತ್ರ ಯೋಜನೆಯನ್ನು ರೂಪಿಸಿದೆ ಎಂದು ಡಿಎಚ್ಒ ವೆಂಕಟೇಶ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ ವತಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳಿಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ನಿರ್ಮೂಲನ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಟಿಬಿ ಮುಕ್ತಗೊಳಿಸಲು ಕ್ಷಯಮುಕ್ತ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಕ್ಷಯರೋಗದ ರೋಗಿಯ ಮತ್ತು ಅವರ ಕುಟುಂಬಕ್ಕೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿಗಳಲ್ಲಿ ಕ್ಷಯ ಮುಕ್ತ ಕರ್ನಾಟಕ ಕಾರ್ಯತಂತ್ರ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು. ಕ್ಷಯರೋಗ ನಿವಾರಣಾ ಆಂದೋಲನ, ಕ್ಷಯ ಆಸರೆ ಮತ್ತು ಟಿಬಿ ಸೋಲಿಸಿ ಗ್ರಾಮ ಪಂಚಾಯಿತಿ ಗೆಲ್ಲಿಸಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸತೀಶ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ರವೀಂದ್ರ, ಡಾ.ಪಾಲಾಕ್ಷ, ಡಾ. ಉಮೇಶ್, ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರದ ಸಿಬ್ಬಂದಿಗಳಾದ ಪುಟ್ಟರಾಜು, ಸುನಿಲ್, ಶ್ರೀಧರ್, ಶಶಿಕಲಾ, ನವೀನ್ ಉಪಸ್ಥಿತರಿದ್ದರು.