ಕೂಡಿಗೆ, ಫೆ. ೮: ಕುಶಾಲನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಮಿತಿಯ ವತಿಯಿಂದ ೨೦೨೧-೨೨ನೇ ಸಾಲಿನ ತರಗತಿ ವಿದ್ಯಾರ್ಥಿ ಪ್ರತಿನಿಧಿ ಹಾಗೂ ವಿದ್ಯಾರ್ಥಿ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅವಿಲೇಶ್ ವಿದ್ಯಾರ್ಥಿ ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಕಾರ್ಯದರ್ಶಿಗಳಾಗಿ ಪ್ರತಾಪ್ ಮತ್ತು ದಿವ್ಯ ಆಯ್ಕೆಯಾದರು. ವಿದ್ಯಾರ್ಥಿ ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಕಾರ್ತಿಕ್, ತೇಜಸ್ವಿ, ಕ್ರೀಡಾ ಕಾರ್ಯದರ್ಶಿಗಳಾಗಿ ಶಿವು, ರಶ್ಮಿತಾ, ಜಂಟಿ ಕಾರ್ಯದರ್ಶಿಗಳಾಗಿ ವರುಣ್, ಶೋಭಾ ಆಯ್ಕೆಯಾದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಂಗಮೂರ್ತಿ ಹೆಚ್.ಬಿ. ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಪ್ರತಿನಿಧಿ ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಿತು. ವಿದ್ಯಾರ್ಥಿ ಸಮಿತಿಯ ಸಂಚಾಲಕರಾದ ಡಾ. ಹರ್ಷ ಬಿ.ಡಿ. ಆಯ್ಕೆ ಪ್ರಕ್ರಿಯೆಯ ನೇತೃತ್ವವನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರುಗಳಾದ ರಮೇಶ್ಚಂದ್ರ ಪಿ., ಡಾ. ಸುರೇಶ್ ಕುಮಾರ್ ಕೆ.ಆರ್., ಪುಟ್ಟರಾಜು ಸಿ, ಗ್ರಂಥಪಾಲಕರಾದ ಚಂದ್ರಶೇಖರ್ ಜಿ.ಎಸ್. ವಸಂತಕುಮಾರಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.