ಕಣಿವೆ, ಫೆ. ೮ : ಕುಶಾಲನಗರದ ಹೊರವಲಯದಲ್ಲಿರುವ ವಸತಿ ನಿಲಯದಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟು ಗುಂಪು ಘರ್ಷಣೆ ನಡೆದಿದೆ.

ಈ ಸಂಬAಧ ಕೆಲವರ ಮೇಲೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಶಾಲನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಹಾಸ್ಟೆಲ್‌ನಲ್ಲಿ ತಂಗಿರುವ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘರ್ಷಣೆ ಉಂಟಾಗಿದೆ. ಈ ಮಧ್ಯೆ ಓರ್ವ ವಿದ್ಯಾರ್ಥಿ ಹೊರಗಿನ ವ್ಯಕ್ತಿಗಳಿಗೆ ಕರೆ ಮಾಡಿ ಹಾಸ್ಟೆಲ್‌ಗೆ ಬರಮಾಡಿ ಕೊಂಡು ಇನ್ನೊಬ್ಬ ವಿದ್ಯಾರ್ಥಿಗೆ ಥಳಿಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಸ್ಟೆಲ್ ಒಳಗಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿ ಅದರ ಆಧಾರದಲ್ಲಿ ಘರ್ಷಣೆ, ಗುಂಪು ಹಲ್ಲೆಗೆ ಸಂಬAಧಿಸಿದAತೆ ಕೆಲವು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.