ಶನಿವಾರಸಂತೆ, ಫೆ. ೭: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವ ನಾಯಕರಾಗಿದ್ದು, ಅವರು ನೀಡಿದ ಸಂವಿಧಾನದ ಕೊಡುಗೆ ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಹೋಬಳಿ ಮಟ್ಟದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬಿಜೆಪಿ ಸರಕಾರ ಮಾತ್ರ ಡಾ. ಅಂಬೇಡ್ಕರ್ ಅವರ ಸಂವಿಧಾನದAತೆ ನಡೆಯುತ್ತಿದೆ. ಸರ್ಕಾರದ ಆದೇಶದಂತೆ ಹೋಬಳಿ ಮಟ್ಟದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣದ ಭೂಮಿ ಪೂಜೆ ನಡೆದಿದ್ದು, ಇದಕ್ಕೆ ಸರ್ಕಾರದಿಂದ ರೂ. ೭೫ ಲಕ್ಷ ಹಣ ಮಂಜೂರಾಗಿದೆ ಎಂದರು.
ದಸAಸ ಜಿಲ್ಲಾ ಸಂಚಾಲಕ ಜೆ.ಆರ್. ಪಾಲಾಕ್ಷ ಮಾತನಾಡಿದರು. ದಲಿತ ಮುಖಂಡ ಈರಯ್ಯ, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ, ಸದಸ್ಯರಾದ ಎಸ್.ಎನ್. ರಘು, ಸರ್ದಾರ್ ಅಹಮ್ಮದ್, ಆದಿತ್ಯ ಗೌಡ, ಸರಸ್ವತಿ, ದುಂಡಳ್ಳಿ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಪ್ಪ ಶಿಕ್ಷಕ ಕೆ.ಪಿ. ಜಯಕುಮಾರ್, ಬಿಜೆಪಿ ಮುಖಂಡರಾದ ಪ್ರತಾಪ್, ಸರೋಜಮ್ಮ, ಯತೀಶ್, ನಿತಿನ್, ಭುವನೇಶ್ವರಿ, ಸವಿತಾ, ದಸಂಸ ಪದಾಧಿಕಾರಿಗಳು ಉಪಸ್ಥಿತರಿದ್ದರು.