ಮುಳ್ಳೂರು, ಫೆ. ೭: ರೋಟರಿ ಕ್ಲಬ್ ಶನಿವಾರಸಂತೆ ಶಾಖೆ ವತಿಯಿಂದ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ರೋಟರಿ ಇಂರ‍್ಯಾಕ್ಟ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆ ರೋಟರಿಯನ್ ಪಿ. ನಾಗೇಶ್ ಪದಗ್ರಹಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು ಬಳಿಕ ಅವರು ಮಾತನಾಡಿ, ರೋಟರಿ ಕ್ಲಬ್ ಸಮಾಜ ಸೇವೆ ನೀಡುತ್ತಿರುವ ವಿಶ್ವದ ಬಹುದೊಡ್ಡ ಸಮಾಜ ಸೇವಾ ಸಂಸ್ಥೆಯಾಗಿದ್ದು ಇಂದು ವಿಶ್ವದ್ಯಾದಂತ ಲಕ್ಷಾಂತರ ಜನರು ರೋಟರಿ ಕ್ಲಬ್ ಸದಸ್ಯರಾಗಿದ್ದಾರೆ. ಈ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವುದರಿಂದ ಮನಸಿಗೆ ಆತ್ಮತೃಪ್ತಿ, ಸಮಾಜದಲ್ಲಿ ಗೌರವ ಸಿಗುತ್ತದೆ ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಸದಸ್ಯರು ಸಮಾಜ ಮುಖೇನ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ವಿದ್ಯಾರ್ಥಿಗಳಲ್ಲಿ ಸಮಾಜ ಸೇವಾ ಮನೋಭಾವನೆ, ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂಬ ಉದ್ದೇಶದ ಹಿನ್ನೆಲೆಯಲ್ಲಿ ರೋಟರಿ ಸಂಸ್ಥೆಯು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ ಗಳ ರೋಟರಿ ಇಂರ‍್ಯಾಕ್ಟ್ ಕ್ಲಬ್ ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಬಗ್ಗೆ ಚಿಂತನೆ ಯನ್ನು ಮೂಡಿಸುತ್ತಿದ್ದು ಈ ದಿಸೆಯಲ್ಲಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಸ್ಥಾಪಿತವಾದ ಇಂರ‍್ಯಾಕ್ಟ್ ಕ್ಲಬ್‌ನಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ಪಿ. ಮೋಹನ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ವಲಯ ಕಾರ್ಯದರ್ಶಿ ಹೆಚ್.ಎಸ್. ವಸಂತ್, ಶನಿವಾರಸಂತೆ ರೋಟರಿ ಕ್ಲಬ್ ಕಾರ್ಯದರ್ಶಿ ಎಂ. ಎಸ್. ವಸಂತ್, ವಿಘ್ನೇಶ್ವರ ಬಾಲಕಿಯರ ಪ.ಪೂ. ಕಾಲೇಜ್ ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ರೋಟರಿ ಕ್ಲಬ್ ಸದಸ್ಯರಾದ ಕೆ.ಪಿ. ಜಯಕುಮಾರ್, ಸುದೀಪ್ ಮುಂತಾದವರಿದ್ದರು.
ಕಾಲೇಜಿನ ವಿದ್ಯಾರ್ಥಿ ರೋಟರಿ ಇಂರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಹಂಪನ, ಕಾರ್ಯದರ್ಶಿ ಯಾಗಿ ಸಹನಾ ಆಯ್ಕೆಯಾದರು. ಇದೆ ದಿನ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲೂ ವಿದ್ಯಾರ್ಥಿಗಳ ರೋಟರಿ ಇಂರ‍್ಯಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ ನಡೆಯಿತು.