ಮಡಿಕೇರಿ, ಫೆ. ೭: ಇಸ್ಲಾಂ ಧರ್ಮದ ಧಾರ್ಮಿಕ ಹಕ್ಕಾಗಿರುವ ಶಿರವಸ್ತçವನ್ನು ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಧರಿಸಲು ಅವಕಾಶ ನೀಡದಿರುವುದು ಖಂಡನೀಯ ಎಂದು ಆರೋಪಿಸಿ ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವೇದಿಕೆಯ ಸಂಚಾಲಕಿ ಹಜ್ಮಿಲಾ, ಪದಾಧಿಕಾರಿಗಳಾದ ನಸೀರ, ಷಂಶುನ್ನೀಸಾ, ಜಾಕಿಯಾ ಮತ್ತಿತರರು ಪಾಲ್ಗೊಂಡಿದ್ದರು.

ಕುಶಾಲನಗರ

ಮುಸ್ಲಿA ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಹಿಜಾಬ್ ಧರಿಸುವುದು ಮುಸ್ಲಿಂ ಮಹಿಳೆಯರ ಜೀವನದ ಒಂದು ಭಾಗವಾಗಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭ ನ್ಯಾಷನಲ್ ವುಮೆನ್ಸ್ ಮೂವ್‌ಮೆಂಟ್‌ನ ರಾಜ್ಯ ಸಮಿತಿ ಸದಸ್ಯೆ ನಜ್‌ರಿಯಾ ಬೆಳ್ಳಾರೆ, ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆಯ ಸಂಚಾಲಕರಾದ ನಜರತ್, ಜಾಕಿಯಾ ಮತ್ತಿತರರು ಇದ್ದರು.