ಮಡಿಕೇರಿ, ಫೆ. ೯: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ ೨೦೨೧-೨೨ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಚಿದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ (ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ಜಿಲ್ಲಾ ಕಚೇರಿಯಿಂದ ಆಫ್‌ಲೈನ್ ಅರ್ಜಿಯನ್ನು ತಾ. ೨೮ ರೊಳಗೆ ಸಲ್ಲಿಸಬೇಕು. ಅರ್ಜಿದಾರರು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಹಾಗೂ ಕಳೆದ ಕನಿಷ್ಟ ೧೫ ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.೯೮ ಸಾವಿರ ಹಾಗೂ ನಗರ ಪ್ರದೇಶವಾದಲ್ಲಿ ರೂ. ೧,೨೦,೦೦೦ ಮಿತಿಯೊಳಗಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ. ೫ ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವುದು.
ಫಲಾಪೇಕ್ಷಿಯು ಅರ್ಜಿಯೊಂದಿಗೆ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್‌ನ ಮೊದಲ ಪುಟದ ಪ್ರತಿ. ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್, ನಿವೇಶನಕ್ಕೆ ಸಂಬAಧಪಟ್ಟ ದಾಖಲಾತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಕಚೇರಿ ಹಾಗೂ ನಿಗಮದ ವೆಬ್‌ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಞmvsಣಜಛಿಟ ನಿಂದ ಪಡೆಯಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.