ಕುಶಾಲನಗರ, ಫೆ. ೯: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಮತ್ತು ಕೇಸರಿ ಶಾಲೆಗಳ ಪ್ರಕರಣ ಹಾಗೂ ವಿದ್ಯಾರ್ಥಿಗಳ ನಡುವೆ ಗಲಾಟೆ ವಿಚಾರಕ್ಕೆ ಸಂಬAಧಿಸಿದAತೆ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಮಂಗಳವಾರ ಕುಶಾಲನಗರ ಪಟ್ಟಣದಲ್ಲಿ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ನಡೆದ ಕೆಲವು ಘಟನೆಗಳಿಗೆ ಸಂಬAಧಿಸಿದAತೆ ಕುಶಾಲನಗರ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಹಲವರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.

ಕುಶಾಲನಗರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ನಡುವೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂದೀಪ್ ಎಂಬ ವಿದ್ಯಾರ್ಥಿ ಮೇಲೆ ಧನುಶ್, ವಿಕ್ರಂ, ಪುನೀತ್ ಕುಮಾರ್ ಎಂಬುವರುಗಳು ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬAಧಿಸಿದAತೆ ದೂರು ದಾಖಲಾಗಿದೆ. ಇನ್ನೊಂದೆಡೆ ಸಂದೀಪ್ ವಿರುದ್ಧ ಕೂಡ ಪ್ರತಿದೂರು ದಾಖಲಾಗಿದೆ.

ಈ ಪ್ರಕರಣದಲ್ಲಿ ಸಂದೀಪ್ ಮೇಲೆ ಹಲ್ಲೆ ನಡೆಸಿದ ಧನುಶ್ ಮತ್ತಿತರ ವಿದ್ಯಾರ್ಥಿಗಳು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ರಸ್ತೆಗೆ ಬಿದ್ದು ಗಾಯವಾಗಿದ್ದು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬಿದ್ದಿದೆ. ಕ್ಷುಲ್ಲಕ ವಿಷಯಕ್ಕೆ ಸಂಬAಧಿಸಿದAತೆ ಸಂದೀಪ್ ಮೇಲೆ ಮೂವರು ವಿದ್ಯಾರ್ಥಿಗಳು ಚಾಕುವಿನಿಂದ ಹಲ್ಲೆ ನಡೆಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕುಶಾಲನಗರ ಡಿವೈಎಸ್ಪಿ ಶೈಲೇಂದ್ರ ತಿಳಿಸಿದ್ದಾರೆ.

ಕುಶಾಲನಗರ ಹೊರವಲಯದ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಬಗ್ಗೆ ಮತ್ತು ಇದೇ ಸಂದರ್ಭ ವಸತಿ ನಿಲಯಕ್ಕೆ ರಾತ್ರಿ ವೇಳೆ ನುಗ್ಗಿದ ಸ್ಥಳೀಯ ಏಳು ವ್ಯಕ್ತಿಗಳ ಮೇಲೆ ದೂರು ದಾಖಲಾಗಿದೆ.

ಇದೇ ಘಟನೆಗೆ ಸಂಬAಧಿಸಿದAತೆ ಹಾರಂಗಿ ರಸ್ತೆಯ ಬಳಿ ಮನೆಯೊಂದಕ್ಕೆ ಅನ್ಯಧರ್ಮೀಯರ ಗುಂಪೊAದು ನುಗ್ಗಿ ದಾಂಧಲೆ ನಡೆಸಲು ಯತ್ನಿಸಿದ ಘಟನೆ ವರದಿಯಾಗಿದೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ಕುಶಾಲನಗರ ಡಿವೈಎಸ್ಪಿ ತಿಳಿಸಿದ್ದಾರೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.