ಚೆಟ್ಟಳ್ಳಿ, ಫೆ. ೮: ಚೆಟ್ಟಳ್ಳಿ ಗ್ರಾಮ ಸಭೆಯಲ್ಲಿ ಪಂಚಾಯಿತಿಯ ಅಧ್ಯಕ್ಷರನ್ನು ನಿಂದಿಸಿದ ಹಾಗೂ ಜಿ.ಪಂ. ಮಾಜಿ ಸದಸ್ಯೆ ಸುನಿತಾ ಮಂಜುನಾಥ್ ಅವರ ಜೊತೆ ಅನುಚಿತ ವರ್ತನೆ ತೋರಿದ ಬಲ್ಲಾರಂಡ ಮಣಿ ಉತ್ತಪ್ಪ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕಾಗಿ ಚೆಟ್ಟಳ್ಳಿ ವಲಯ ಕಾಂಗ್ರೆಸ್ ಒತ್ತಾಯಿಸಿದೆ.
ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಪಪ್ಪು ತಿಮ್ಮಯ್ಯ, ಅವರ ವರ್ತನೆಯನ್ನು ಸಾಮೂಹಿಕವಾಗಿ ಖಂಡಿಸಲಾಯಿತು. ಪೊಲೀಸರು ಶೀಘ್ರವಾಗಿ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪೊಲೀಸರು ಆರೋಪಿಯನ್ನು ಬಂಧಿಸದಿದ್ದಲ್ಲಿ ಚೆಟ್ಟಳ್ಳಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಸುನಿತಾ ಮಂಜುನಾಥ್, ಗ್ರಾ.ಪಂ. ಅಧ್ಯಕ್ಷ ಪಿ.ಟಿ. ಮುತ್ತಪ್ಪ, ಮಾಜಿ ಸದಸ್ಯ ರಫೀಕ್ ಕಂಡಕೆರೆ, ಹಾಲಿ ಸದಸ್ಯರಾದ ಸಿಂಧೂ, ಮಂಜುನಾಥ್ ಮತ್ತು ಹಲವಾರು ಕಾರ್ಯಕರ್ತರು ಹಾಜರಿದ್ದರು.