ಸಿದ್ದಾಪುರ, ಫೆ. ೮: ತಾ.ಪಂ. ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಅವರನ್ನು ಬಂಧಿಸಬೇಕೆAದು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗೀಸ್ ಒತ್ತಾಯಿಸಿದ್ದಾರೆ.

ನೆಲ್ಲಿಹುದಿಕೇರಿಯಲ್ಲಿ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯನ್ನು ಖಂಡಿಸಿದ್ದಾರೆ. ಸುನೀತಾ ಜೊತೆ ಅನುಚಿತವಾಗಿ ವರ್ತಿಸಿದ ಮಣಿ ಉತ್ತಪ್ಪ ಅವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನೆಲ್ಲಿಹುದಿಕೇರಿ ಗ್ರಾ.ಪಂ. ಸದಸ್ಯರುಗಳಾದ ಎ.ಕೆ. ಹಕೀಂ, ಸಫಿಯಾ, ಮುಸ್ತಫ, ಅಶೋಕ್, ಹನೀಫ್, ಸುಹಾದ, ಕೋಯ, ಪಕ್ಷದ ಪದಾಧಿಕಾರಿ ಶೀಯಾಜ್ ಇನ್ನಿತರರು ಹಾಜರಿದ್ದರು.