ಮಡಿಕೇರಿ, ಫೆ. ೯: ಮೈಸೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೧-೨೨ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿAಗ್ ಕೋರ್ಸಗಾಗಿ ಬಿ.ಇ., ಮೆಕ್ಯಾನಿಕಲ್, ಇಂಡಸ್ಟಿçÃಯಲ್ ಪ್ರೋಡಕ್ಷನ್, ಆಟೋ ಮೊಬೈಲ್, ಆಟೋಮೇಷನ್ ಮತ್ತು ರೋಬೋಟಿಕ್ಸ್ /ಮೇರಿನ್ ಇಂಜಿನಿಯರಿAಗ್ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ. ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿAಗ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಯಲ್ಲಿ ಕೈಗಾರಿಕಾ ಘಟಕವಿರುವುದರಿಂದ ವಿದ್ಯಾರ್ಥಿಗಳಿಗೆ ಸಿಎನ್‌ಸಿ ಯಂತ್ರದಲ್ಲಿ, ರೊಬೋಟಿಕ್ಸ್ ಹಾಗೂ ೩ಡಿ ಪ್ರಿಂಟಿAಗ್‌ನಲ್ಲಿ ಕೆಲಸ ಮಾಡಬಹುದಾಗಿದ್ದು, ಇದಕ್ಕೆ ಬೇಕಾದಂತಹ ನೂತನ ತಂತ್ರಜ್ಞಾನ ಹಾಗೂ ಉಂತ್ರೋಪಕರಣಗಳು ಲಭ್ಯವಿದೆ. ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುವುದು ಮತ್ತು ಇಲ್ಲಿಯವರೆಗೆ ಎಲ್ಲಾ ಪಾಸಾದಂತಹ ವಿದ್ಯಾರ್ಥಿಗಳಿಗೆ ಉದ್ಯೋಗವು ಲಭಿಸಿದೆ.
ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. ೯೩ ಮತ್ತು ೯೪, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು-೧೬. ಮೊಬೈಲ್ ನಂ:೯೨೪೩೯೮೯೯೫೪/ ೯೧೪೧೬೩೦೩೦೩/೭೮೯೨೪೯೮೫೨೩ ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿ.ಟಿ.ಟಿ.ಸಿ ವ್ಯವಸ್ಥಾಪಕರು ತಿಳಿಸಿದ್ದಾರೆ.