ಮಡಿಕೇರಿ, ಫೆ. ೯: ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಸಭಾಂಗಣದಲ್ಲಿ ತಾ. ೧೦ರಂದು (ಇಂದು) ಸಂಜೆ ೬.೩೦ ಗಂಟೆಗೆ ಮಾಧವಿ ಸಾಮಾಜಿಕ ನಾಟಕ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿ ರುವ ನಾಟಕ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್ ಚಾಲನೆ ನೀಡಲಿದ್ದಾರೆಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ವಿ.ಎನ್. ಉಮಾಶಂಕರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಗೌಡ, ಗೀತಾ ಗಾಯನ ಸ್ಪರ್ಧೆ ಸಂಚಾಲಕಿ ಪ್ರಜ್ಞಾ ರಾಜೇಂದ್ರ ಪಾಲ್ಗೊಳ್ಳಲಿದ್ದಾರೆ.