ಮಡಿಕೇರಿ, ಫೆ. ೮: ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ ತಾ. ೧೧ ಮತ್ತು ೧೨ರಂದು ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ತಾ. ೧೧ರಂದು ಸಂಜೆ ೫ ಗಂಟೆಗೆ ಹಸಿರು ಹೊರೆ ಕಾಣಿಕೆ, ಉಗ್ರಾಣ ಪೂಜೆ, ಸಂಜೆ ೬ ಗಂಟೆಗೆ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, ರಾತ್ರಿ ೭.೩೦ಕ್ಕೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನದಾನ ನೆರವೇರಲಿದೆ.

ತಾ. ೧೨ರಂದು ಬೆಳಿಗ್ಗೆ ೮ ಗಂಟೆಯಿAದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ ೫.೩೦ ರಿಂದ ರಂಗಪೂಜೆ, ರಾತ್ರಿ ೭ ಗಂಟೆಯಿAದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನದಾನ ನಡೆಯಲಿದೆ.