ಶನಿವಾರಸಂತೆ, ಫೆ. ೮: ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಶಿವಕುಮಾರ ಮಹಾ ಸ್ವಾಮೀಜಿಯವರ ಪುಣ್ಯಾರಾಧನಾ ಕಾರ್ಯಕ್ರಮ ಜರುಗಿತು.

ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬನ್ನಿಮರಕ್ಕೆ ಪೂಜೆ ಸಲ್ಲಿಸಿ, ಶಿವಕುಮಾರ ಮಹಾ ಸ್ವಾಮೀಜಿಯವರ ಭಾವಚಿತ್ರವನ್ನು ರಥದಲ್ಲಿರಿಸಿ ವಾದ್ಯಗೋಷ್ಠಿ ನಂದೀಧ್ವಜ ಹಾಗೂ ವೀರಗಾಸೆ ವೈಭವದೊಂದಿಗೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಗುಡುಗಳಲೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ದಲ್ಲಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮುಂದುವರೆಸಿ ಕೊಂಡೊಯ್ದು ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು.

ನಂತರ ದೇವಾಲಯ ಆವರಣದಲ್ಲಿ ನಡೆದ ಆಶೀರ್ವಚನ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಮಾತನಾಡಿ, ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳು ಅಕ್ಷರ ಮತ್ತು ಅನ್ನದಾಸೋಹ ಕಾರ್ಯಕ್ರಮಗಳ ಮೂಲಕ ಜನರಿಗೆ ದೇವ ಸ್ವರೂಪಿಯಾಗಿದ್ದರು ಎಂದರು. ಕಲ್ಲು ಮಠಾಧೀಶ ಮಹಾಂತಸ್ವಾಮೀಜಿ ಹಾಗೂ ಮುದ್ದಿನಕಟ್ಟೆ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ವೀರಶೈವ ಸಮಾಜ ತಾಲೂಕು ಅಧ್ಯಕ್ಷ ಕೆ.ಬಿ. ಹಾಲಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಕಾಳಿಕಾಂಬ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಲ್. ಲಕ್ಷö್ಮಣಾಚಾರ್, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ನಾಗರಾಜ್, ಸೋಮಶೇಖರ ಶಾಸ್ತಿç, ಪ್ರಮುಖರಾದ ಶಿವಪ್ಪ, ಕಾಂತರಾಜ್, ಎಸ್.ಎಂ. ಬಸವರಾಜ್, ವೀರೇಂದ್ರ ಕುಮಾರ್, ಎಚ್.ಎಂ. ವಿನಯ್, ಕುಶಾಲಪ್ಪ, ಸಂದೀಪ್, ಸೋಮಶೇಖರ್, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಇದ್ದರು.

ಕಾರ್ಯಕ್ರಮದ ಪ್ರಯುಕ್ತ ದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.