ಮಡಿಕೇರಿ, ಫೆ. ೮: ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಜ್ಯೋತಿ ಬೆಳಗುವುದರ ಮೂಲಕ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುರುಷೋತ್ತಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ. ಟಿ. ದರ್ಶನ್ ಹಾಜರಿದ್ದರು.